Saturday, May 16, 2026
Google search engine
Homeರಾಜ್ಯರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ: ಬಲವಂತದ ಭೂಸ್ವಾಧೀನ ಕೈಬಿಡಲು ತೀರ್ಮಾನ

ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ: ಬಲವಂತದ ಭೂಸ್ವಾಧೀನ ಕೈಬಿಡಲು ತೀರ್ಮಾನ

ರೈತರ ಒತ್ತಡಕ್ಕೆ ಮಣಿದಿ ರಾಜ್ಯ ಸರ್ಕಾರ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಕೈಬಿಡಲು ತೀರ್ಮಾನಿಸಿದೆ.

ಬೆಂಗಳೂರಿನ ವಿಧಾನಸೌಧದಲ್ಲಿ ಮಂಗಳವಾರ ನಡೆದ ರೈತರ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಜಮೀನು ಭೂಸ್ವಾಧೀನ ಮಾಡಿಕೊಳ್ಳುವ ಬಲವಂತದ ಪ್ರಕ್ರಿಯೆ ಹಿಂಪಡೆಯಲು ನಿರ್ಧರಿಸಲಾಗಿದೆ ಎಂದರು.

ಚನ್ನರಾಯಪಟ್ಟಣ, ದೇವನಹಳ್ಳಿ ಮುಂತಾದ ಕಡೆಗಳಲ್ಲಿ ರೈತರು ಭೂಮಿ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರಿಗೆ ಬಲವಂತವಾಗಿ ಭೂಸ್ವಾಧೀನಪಡಿಸಿಕೊಳ್ಳುವ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸದಿದಿದೆ. ರೈತರು ಸ್ವಯಂಪ್ರೇರಿತವಾಗಿ ಭೂಮಿ ನೀಡಿದರೆ ಅವರಿಗೆ ಸೂಕ್ತ ಪರಿಹಾರ ಮೊತ್ತ ಹಾಗೂ ಸೂಕ್ತ ಜಾಗದಲ್ಲಿ ನಿವೇಶನ ನೀಡಲಾಗುವುದು ಎಂದು ಅವರು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments