Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ
ದೇಶ

ಕಾಶ್ಮೀರಕ್ಕೆ ಪ್ರವಾಸಿಗರ ಸಂಖ್ಯೆಯಲ್ಲಿ ಶೇ.52ರಷ್ಟು ಕುಸಿತ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 20 ವೀಕ್ಷಣೆಗಳು
jammu kashmir

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪ್ರವಾಸೋದ್ಯಮ ಇಲಾಖೆಯ ಅಧಿಕೃತ ದತ್ತಾಂಶದ ಪ್ರಕಾರ, 2025ರ ಮೊದಲಾರ್ಧದಲ್ಲಿ ಕಾಶ್ಮೀರ ಕಣಿವೆ ಸುಮಾರು 7.53 ಲಕ್ಷ ಪ್ರವಾಸಿಗರನ್ನು ಸ್ವಾಗತಿಸಿದೆ.

ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಪ್ರವಾಸಿಗರ ಸಂಖ್ಯೆ ಅರ್ಧದಷ್ಟು ಕಡಿಮೆಯಾಗಿರುವುದನ್ನು ತೋರಿಸುತ್ತದೆ.

ಮೊದಲ ಮೂರು ತಿಂಗಳಲ್ಲಿ 5.25 ಲಕ್ಷ ಪ್ರವಾಸಿಗರ ಆಗಮನದೊಂದಿಗೆ ಜಮ್ಮು ಕಾಶ್ಮೀರ ಭರವಸೆಯ ಆರಂಭವನ್ನು ಕಂಡರೆ, ಏಪ್ರಿಲ್ 22 ರಂದು ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲುಗಳಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯು ತೀವ್ರ ಕುಸಿತಕ್ಕೆ ಕಾರಣವಾಯಿತು. ಇದರ ಪರಿಣಾಮವಾಗಿ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಪ್ರವಾಸಿಗರ ಸಂಖ್ಯೆಯಲ್ಲಿ ಒಟ್ಟಾರೆ ಶೇ. 52 ರಷ್ಟು ಕುಸಿತ ಕಂಡುಬಂದಿದೆ ಎಂದು ದತ್ತಾಂಶಗಳು ಬಹಿರಂಗಪಡಿಸಿವೆ.

ದತ್ತಾಂಶದ ಪ್ರಕಾರ, 2024ರ ಮೊದಲ 6 ತಿಂಗಳಲ್ಲಿ 15.65 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. 2023ರಲ್ಲಿ ಇದೇ ಅವಧಿಯಲ್ಲಿ, ಕಣಿವೆಯಲ್ಲಿ 13.63 ಲಕ್ಷಕ್ಕೂ ಹೆಚ್ಚು ಪ್ರವಾಸಿಗರ ಆಗಮನ ದಾಖಲಾಗಿತ್ತು.

ದೇಶೀಯ ಪ್ರವಾಸಿಗರ ಸಂಖ್ಯೆಯೂ ಶೇ. 52 ರಷ್ಟು ಕಡಿಮೆಯಾಗಿದ್ದು, 2024 ರಲ್ಲಿ 15.39 ಲಕ್ಷದಿಂದ 2025ರಲ್ಲಿ 7.38 ಲಕ್ಷಕ್ಕೆ ಇಳಿದಿದೆ. ಆದರೆ ವಿದೇಶಿ ಆಗಮನ ಶೇ.41ರಷ್ಟು ಕಡಿಮೆಯಾಗಿದ್ದು, 25,995ರಿಂದ 15,319ಕ್ಕೆ ಇಳಿದಿದೆ.
ಕುತೂಹಲದ ವಿಷಯ ಎಂದರೆ 2023ಕ್ಕೆ ಹೋಲಿಸಿದರೆ 2024ರಲ್ಲಿ ಕಾಶ್ಮೀರಕ್ಕೆ ಒಟ್ಟಾರೆ ಪ್ರವಾಸಿಗರ ಆಗಮನದಲ್ಲಿ ಶೇ. 14.8 ರಷ್ಟು ಹೆಚ್ಚಳ ಕಂಡುಬಂದಿದೆ. ದೇಶೀಯ ಪ್ರವಾಸಿಗರ ಸಂಖ್ಯೆ ಶೇ. 14.2 ರಷ್ಟು ಏರಿಕೆಯಾಗಿದ್ದು, 2023ರಲ್ಲಿ 13.48 ಲಕ್ಷದಿಂದ 2024 ರಲ್ಲಿ 15.39 ಲಕ್ಷಕ್ಕೆ ಏರಿಕೆಯಾಗಿದೆ.

ವಿದೇಶಿ ಸಂದರ್ಶಕರ ಸಂಖ್ಯೆ ಶೇ. 64 ರಷ್ಟು ಏರಿಕೆಯಾಗಿದ್ದು, 15,852ರಿಂದ 25,995ಕ್ಕೆ ಏರಿಕೆಯಾಗಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯು ಕಾಶ್ಮೀರಕ್ಕೆ ಪ್ರವಾಸಿಗರ ಆಗಮನಕ್ಕೆ ದೊಡ್ಡ ಹೊಡೆತ ನೀಡಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ.

`ದೇಶೀಯ ಪ್ರವಾಸಿಗರು ಮಾತ್ರವಲ್ಲದೆ ವಿದೇಶಿ ಪ್ರವಾಸಿಗರೂ ಕಾಶ್ಮೀರವನ್ನು ತಮ್ಮ ರಜಾ ತಾಣವಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದರು, ಆದರೆ ಪಹಲ್ಗಾಮ್ ದಾಳಿಯು ಇಡೀ ಉದ್ಯಮವನ್ನೇ ಬೆಚ್ಚಿ ಬೀಳಿಸಿದೆ’ ಎಂದು ತಿಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8411 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment