Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಓಪಿಎಸ್ ಜಾರಿಗೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಭರವಸೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 33 ವೀಕ್ಷಣೆಗಳು
siddaramiah

ಮೈಸೂರು: ಏಳನೇ ವೇತನ‌ ಆಯೋಗದ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿ ಮಾಡಿದ್ದೇನೆ. ಒಪಿಎಸ್ ಜಾರಿ ಕುರಿತಾಗಿ ಸಮಿತಿ ವರದಿ ಕೊಟ್ಟ ಬಳಿಕ‌ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆರೋಗ್ಯ ಸಂಜೀವಿನಿ ಬಗ್ಗೆಯೂ ಸೂಕ್ತ ತೀರ್ಮಾನ ಆಗಿದೆ. ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ದವಿದೆ. ನಿಮ್ಮ ಬೇಡಿಕೆಗಳ ಈಡೇರಿಕೆಗೆ ಸದಾ ತೆರೆದ ಮನಸ್ಸಿನಿಂದ ಇರುತ್ತೇನೆ. ಹಾಗೆಯೇ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು , ಈ ಜವಾಬ್ದಾರಿಯನ್ನೂ ನೀವು ಪರಿಣಾಮಕಾರಿಯಾಗಿ ಜನರಿಗೆ, ಫಲಾನುಭವಿಗಳಿಗೆ ತಲುಪಿಸಿ ಎಂದರು.

ಸರ್ಕಾರಿ ನೌಕರರು ಜಾತಿ-ಧರ್ಮ‌ ಮಾಡೋಕೆ ಹೋಗಬಾರದು. ಪ್ರತಿಭೆ ಯಾರ ಸೊತ್ತೂ ಅಲ್ಲ. ಅವಕಾಶ ಸಿಕ್ಕರೆ ಪ್ರತಿಭೆ ಹೊರಗೆ ಬರುತ್ತದೆ. ಮಕ್ಕಳ ಪ್ರತಿಭೆ ರೂಪುಗೊಳ್ಳಲು ಶಿಕ್ಷಕರಷ್ಟೇ ಪೋಷಕರ ಶ್ರಮ ಕೂಡ ಅಗತ್ಯ. ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳದಿದ್ದರೆ ಯಾರನ್ನೂ ದೂರಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು. ಇದು ನಿಮ್ಮ ವೃತ್ತಿಗೆ ಮಾಡುವ ಅವಮಾನ. ನಮ್ಮ ಮೇಲೆ, ಸರ್ಕಾರಿ ನೌಕರರ ಮೇಲೆ ಸಮಾಜದ ಋಣ ಇದೆ. ಅಪ್ಪ ಅಮ್ಮ ಖರ್ಚು ಮಾಡಿದ ಹಣದಲ್ಲಿ ನೀವೆಲ್ಲಾ ಸರ್ಕಾರಿ ನೌಕರರಾಗಲು ಸಾಧ್ಯವಿಲ್ಲ. ನಾವು ಶಾಸಕರಾಗಲು, ಮಂತ್ರಿಗಳಾಗಲು ಸಾಧ್ಯವಿಲ್ಲ. ಜನರ ತೆರಿಗೆ ಹಣದಲ್ಲಿ ನಾವೆಲ್ಲಾ ಬದುಕಿದ್ದೇವೆ. ಹೀಗಾಗಿ ಸಮಾಜದ, ಎಲ್ಲಾ ಜಾತಿ, ಧರ್ಮದವರ ಋಣವೂ ನಮ್ಮ ಮೇಲಿದೆ. ಈ ಋಣ ಪ್ರಜ್ಞೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

ನಮಗೆ ವಿಶ್ವ ಮಾನವರಾಗುವ ಅವಕಾಶ ಇದೆ. ಅಲ್ಪ ಮಾನವರಾಗುವುದು  ಬೇಡ. ಹುಟ್ಟು ಆಕಸ್ಮಿಕ. ಸಾವು ಗ್ಯಾರಂಟಿ. ಆದ್ದರಿಂದ ನಾವು ಸಮಾಜದ ಋಣ ತೀರಿಸಿ ಬದುಕನ್ನು ಸಾರ್ಥಕ ಮಾಡಿಕೊಳ್ಳಿ. ಶಿಕ್ಷಕರು, ಸೈನಿಕರು, ರೈತರು ನಮ್ಮ ಬದುಕನ್ನು ಹಸನು ಮಾಡಿದ್ದಾರೆ. ಈ ಮೂವರ ಋಣ ತೀರಿಸುವ ಕೆಲಸ ನಾವು ಮಾಡಬೇಕಿದೆ. ಮಕ್ಕಳಲ್ಲೂ ವೈಚಾರಿಕ, ವೈಜ್ಞಾನಿಕ ಪ್ರಜ್ಞೆ ಮೂಡಿಸುವ ಮೂಲಕ ಸಮಾಜಮುಖಿ ಪ್ರಜೆಗಳನ್ನು ರೂಪಿಸಿ. ಸರ್ಕಾರದ ಕೆಲಸ ಜನರಿಗೆ ತಲುಪಿಸಿ ಎಂದು ತಿಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment