Saturday, May 16, 2026
Google search engine
Homeಅಪರಾಧಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ: ಎಸ್‌ ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ: ಎಸ್‌ ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂತಿಟ್ಟ ಪ್ರಕರಣದಲ್ಲಿ ಐಪಿಎಸ್‌ ಹಿರಿಯ ಅಧಿಕಾರಿ ಪ್ರಣಬ್‌ ಮೊಹಾಂತಿ ನೇತೃತ್ವದಲ್ಲಿ ಎಸ್‌ ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೈಸೂರಿನಲ್ಲಿ ನಡೆದ ಸರ್ಕಾರದ ಸಾಧನಾ ಸಮಾವೇಶದ ವೇಳೆ ಪೊಲೀಸ್‌ ವರದಿ ಆಧರಿಸಿ ಕ್ರಮ್ಕೈಗೊಳ್ಳುವುದಾಗಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಭಾನುವಾರ ಎಸ್‌ ಐಟಿ ರಚನೆ ಮಾಡಿ ತನಿಖೆಗೆ ಆದೇಶಿಸಿದೆ.

ಹಿರಿಯ ಐಪಿಎಸ್‌ ಅಧಿಕಾರಿ ಅಧಿಕಾರಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ಎಸ್‍ಐಟಿ ರಚನೆ ಮಾಡಲಾಗಿದೆ. ಐಪಿಎಸ್ ಅಧಿಕಾರಿಗಳಾದ ಅನುಚೇತ್, ಸೌಮ್ಯಲತಾ ಮತ್ತು ಜಿತೇಂದ್ರ ಕುಮಾರ್ ದಯಾಮಾ ತನಿಖಾ ತಂಡದಲ್ಲಿದ್ದಾರೆ.

ಡಿಜಿಐಜಿಪಿಗೆ ತನಿಖಾ ಹಂತದ ಮಾಹಿತಿ ಆಗಿಂದಾಗ ಕೊಡಬೇಕು. ತನಿಖೆಯ ಅಂತಿಮ ವರದಿಯನ್ನು ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸಬೇಕೆಂದು ಎಸ್‍ಐಟಿ ತಂಡಕ್ಕೆ ಸರ್ಕಾರಕ್ಕೆ ಸೂಚಿಸಿದೆ.

ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮೀ ಮುಖ್ಯಮಂತ್ರಿಗೆ ಪತ್ರ ಬರೆದು ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ಕುರಿತು ಎಸ್‌ ಐಟಿ ರಚಿಸುವಂತೆ ಕೋರಿದ್ದರು. ನಾಗಲಕ್ಷ್ಮೀ ಅವರ ಪತ್ರಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ ಎಸ್‌ ಐಟಿ ರಚನೆ ಮಾಡಿ ಆದೇಶ ಹೊರಡಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments