Monday, June 1, 2026
Google search engine
Homeರಾಜ್ಯಗಣ್ಯರ ವಾಹನಗಳ ಸೈರನ್ ನಿಷೇಧಿಸಿದ ಪೊಲೀಸ್ ಇಲಾಖೆ!

ಗಣ್ಯರ ವಾಹನಗಳ ಸೈರನ್ ನಿಷೇಧಿಸಿದ ಪೊಲೀಸ್ ಇಲಾಖೆ!

ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳು ಸಂಚರಿಸುವಾಗ ಬಳಸುವ ಸೈರನ್ ನಿಷೇಧಿಸಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರ ಸುರಕ್ಷತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ ಹಾಗೂ ಸೈರನ್​ ಬಳಕೆಯಿಂದ ಗಣ್ಯ ವ್ಯಕ್ತಿಗಳ ಸಂಚಾರದ ಬಗ್ಗೆ ಮಾಹಿತಿ ದುಷ್ಕರ್ಮಿಗಳಿಗೆ ಸಿಗುತ್ತದೆ ಎಂಬ ಕಾರಣಕ್ಕೆ ಸೈರನ್ ಬಳಕೆ ನಿಷೇಧಿಸಲಾಗಿದೆ.

ಸಾರ್ವಜನಿಕ ರಸ್ತೆಗಳ ಮೇಲೆ ಹಠಾತ್ತಾಗಿ ಸೈರನ್ ಬಳಸುವುದರಿಂದ ಇತರ ವಾಹನ ಚಾಲಕರಿಗೆ ತೊಂದರೆಯಾಗುತ್ತದೆ. ಸೈರನ್ ಬಳಕೆಯಿಂದ ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಿಸಿ ಬೆಂಗಾವಲು ಅಪಘಾತ ಉಂಟಾಗುವ ಸಾಧ್ಯತೆ ಇರುತ್ತದೆ. ವಿಐಪಿ ಸಂಚಾರದ ವೇಳೆ, ತುರ್ತು ಚಲನವಲನದ ಅವಶ್ಯಕತೆಗಳಿಗೆ ವೈರ್‌ಲೆಸ್ ಕಮ್ಯುನಿಕೇಶನ್ ಮುಖಾಂತರ ಮಾಹಿತಿ ವಿನಿಮಯ ಮಾಡಬೇಕು. ಸೈರನ್‌ಗಳನ್ನು ಕೇವಲ ಅಂಬ್ಯುಲೆನ್ಸ್, ಪೊಲೀಸ್, ಅಗ್ನಿಶಾಮಕ ವಾಹನಗಳು ತುರ್ತು ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕೆಂದು ಡಿಜಿ, ಐಜಿಪಿ ಎಂ.ಎ.ಸಲೀಂ  ಆದೇಶದಲ್ಲಿ ಸೂಚಿಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶದ ಪ್ರಕಾರ ತುರ್ತು ಸೇವೆಯ ವಾಹನಗಳನ್ನು ಬಿಟ್ಟು ಇನ್ಯಾರೂ ಸೈರನ್ ಬಳಸುವಂತಿಲ್ಲ. ಹಾಗೆಯೇ ಪೊಲಿಸ್ ಸೈರನ್ ಬಳಸುವಂತಿಲ್ಲ. ತುರ್ತು ಸಂದರ್ಭಗಳಲ್ಲಿ ಮಾತ್ರ, ಪೊಲೀಸ್ ಅಂಬ್ಯುಲೆನ್ಸ್, ಅಗ್ನಿ ಶಾಮದಳ ವಾಹನಗಳು ಮಾತ್ರ ಈ ಸೈರನ್ ಬಳಕೆ ಮಾಡಬಹುದಾಗಿದೆ. ನಿಯಮ ಉಲ್ಲಂಘಿಸಿದರೆ ಮೋಟರ್ ವಾಹನ ಕಾ್ಯದೆ 190(2( ಪ್ರಕಾರ ದಂಡ ಜತೆಗೆ ಮೂರು ತಿಂಗಳು ಜೈಲು ಶಿಕ್ಷೆಯನ್ನು ವಿಧಿಸಬಹುದು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments