6 ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳಿಗೆ ಶನಿವಾರ ನಡೆದ 6ನೇ ಹಂತದ ಲೋಕಸಭಾ ಚುನಾವಣೆಯಲ್ಲಿ ರಾತ್ರಿ 7.45ರವರೆಗೆ ಮತದಾನ ನಡೆದಿದ್ದು, ಶೇ.56.06ರಷ್ಟು ಮತದಾನ ದಾಖಲಾಗಿದೆ.
6ನೇ ಹಂತದ ಚುನಾವಣೆಯಲ್ಲಿ 11 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದು, 58 ಸ್ಥಾನಗಳಿಗೆ ಕಣದಲ್ಲಿರುವ 889 ಅಭ್ಯರ್ಥಿಗಳ ಹಣೆಬರಹ ನಿರ್ಧರಿಸಲಿದ್ದಾರೆ. ಇದರೊಂದಿಗೆ 543 ಸ್ಥಾನಗಳ ಪೈಕಿ 486 ಸ್ಥಾನಗಳಿಗೆ ಮತದಾನ ಪೂರ್ಣಗೊಂಡಿದ್ದು, ಹರಿಯಾಣ, ದೆಹಲಿ ಮತ್ತು ಜಮ್ಮು ಕಾಶ್ಮೀರದಲ್ಲಿ ಪೂರ್ಣ ಪ್ರಮಾಣದಲ್ಲಿ ಮತದಾನ ನಡೆದಂತಾಯಿತು.
ಪಶ್ಚಿಮ ಬಂಗಾಳದಲ್ಲಿ ಗರಿಷ್ಠ ಶೇ.52ರಷ್ಟು ಮತದಾನವಾಗಿದೆ. ದೆಹಲಿಯಲ್ಲಿ ಕನಿಷ್ಠ ಶೇ.34.4ರಷ್ಟು ಮತದಾನವಾಗಿದೆ.
ರಾಷ್ಟ್ರಪತಿ ದ್ರೌಪದಿ ಮರ್ಮು, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೇನಕಾ ಗಾಂಧಿ, ಪ್ರಿಯಾಂಕಾ ಗಾಂಧಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಜಮ್ಮು ಕಾಶ್ಮೀರದ ಮಾಜಿ ಸಿಎಂ ಮೆಹಬೂಬ ಮುಫ್ತಿ ಮುಂತಾದವರು ಮತ ಚಲಾಯಿಸಿದರು.