ಅಚ್ಚರಿ ಬೆಳವಣಿಗೆಯೊಂದರಲ್ಲಿ ಮುಂಗಾರು ಲೋಸಕಭಾ ಅಧಿವೇಶನದ ಮೊದಲ ದಿನವೇ ಜಗದೀಪ್ ಧಂಕರ್ ಉಪ ರಾಷ್ಟ್ರಪತಿ ಸ್ಥಾನಕ್ಕೆ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮರ್ಮು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಜಗದೀಪ್ ಧಂಕರ್ ಕೂಡಲೇ ರಾಜೀನಾಮೆ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ.
ಆರೋಗ್ಯದ ಹಿತದೃಷ್ಟಿಯಿಂದ ವೈದ್ಯರ ಸಲಹೆ ಮೇರೆಗೆ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಪ್ರಸ್ತುತ ಸನ್ನಿವೇಶದಲ್ಲಿ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕಾಗಿದೆ ಎಂದು ಅವರು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ತಮ್ಮ ಅವಧಿಯಲ್ಲಿ ಕೆಲಸ ಮಾಡಲು ಸಹಕರಿಸಿದ ಮತ್ತು ಬೆಂಬಲ ನೀಡಿದ ರಾಷ್ಟ್ರಪತಿ ಸೇರಿದಂತೆ ಎಲ್ಲರಿಗೂ ಅವರು ಧನ್ಯವಾದ ಅರ್ಪಿಸಿದ್ದಾರೆ.


