Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಮನೆಯಲ್ಲಿ ಊಟ ಮಾಡಿದ 6 ಮಂದಿಗೆ ಹೊಟ್ಟೆನೋವು, 3 ಮಂದಿ ಸಾವು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 39 ವೀಕ್ಷಣೆಗಳು
raichur news

ರಾಯಚೂರು: ಊಟ ಸೇವಿಸಿದ ಬಳಿಕ ಹೊಟ್ಟೆನೋವು ಕಾಣಿಸಿಕೊಂಡು ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ರಾಯಚೂರಿನಲ್ಲಿ ಸಂಭವಿಸಿದೆ.

ಸಿರವಾರ ತಾಲೂಕಿನ ಕೆ.ತಿಮ್ಮಾಪುರದ ಗ್ರಾಮದ ನಿವಾಸಿಗಳಾದ ತಂದೆ ರಮೇಶ್ (35), ಪುತ್ರಿ ನಾಗಮ್ಮ (8) ಮತ್ತು ದೀಪಾ (6) ಮೃತಪಟ್ಟಿದ್ದಾರೆ.

ಮನೆಯಲ್ಲಿ ಊಟ ಮಾಡಿದ ನಂತರ 6 ಮಂದಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ದೀಪಾ ಮೃತಪಟ್ಟರೆ ರಮೇಶ್ ಮತ್ತು ನಾಗಮ್ಮ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮತ್ತಿಬ್ಬರು ಮಕ್ಕಳಾದ ಕೃಷ್ಣ, ಚೈತ್ರಾಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಕುಟುಂಬದವರೆಲ್ಲ ಸೋಮವಾರ ರಾತ್ರಿ ಚವಳಿಕಾಯಿ ಪಲ್ಯ, ರೊಟ್ಟಿ, ಅನ್ನ, ಸಾಂಬಾರ್ ಊಟ ಮಾಡಿದ್ದರು. ಊಟ ಮಾಡಿ ಮಲಗಿದ್ದ 6 ಜನರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು.

ಹೊಟ್ಟೆ ನೋವಿನಿಂದ ನರಳಾಡುತ್ತಿದ್ದ 6 ಮಂದಿಯನ್ನು ಮುಂಜಾನೆ 4 ಗಂಟೆ ಸುಮಾರಿಗೆ ಲಿಂಗಸುಗೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ತಂದೆ ರಮೇಶ್, ಪುತ್ರಿ ನಾಗಮ್ಮ ಸಾವಿಗೀಡಾಗಿದ್ದಾರೆ.  ಕವಿತಾಳ ಪೊಲೀಸ್ ‌ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment