Thursday, July 2, 2026
Google search engine
Homeರಾಜ್ಯರೈತರಿಗೆ ಸಿಹಿಸುದ್ದಿ: ಸೋಲಾರ್ ಕೃಷಿ ಪಂಪ್ ಗೆ ಶೇ.80ರಷ್ಟು ಸಬ್ಸಿಡಿ ಸಿಎಂ ಘೋಷಣೆ

ರೈತರಿಗೆ ಸಿಹಿಸುದ್ದಿ: ಸೋಲಾರ್ ಕೃಷಿ ಪಂಪ್ ಗೆ ಶೇ.80ರಷ್ಟು ಸಬ್ಸಿಡಿ ಸಿಎಂ ಘೋಷಣೆ

ಬೆಂಗಳೂರು: ಕುಸುಮ್ ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್‌ಸೆಟ್‌ ಅಳವಡಿಸಿಕೊಂಡ ರೈತರಿಗೆ ಶೇ.80ರಷ್ಟು ಸಬ್ಸಿಡಿ ದೊರೆಯಲಿದ್ದು, ರೈತರು ಕೇವಲ ಶೇ.20ರಷ್ಟು ವೆಚ್ಚ ಭರಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ನಡೆದ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕುಸುಮ್ ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್ ಸೆಟ್ ಅಳವಡಿಕೆಗೆ 40 ಸಾವಿರ ಪಂಪ್ ಸೆಟ್ ಗಳಿಗೆ ಅನುಮೋದನೆ ನೀಡಲಾಗಿದ್ದು, ರೈತರಿಗೆ ಕೇಂದ್ರ ಸರ್ಕಾರದಿಂದ ಶೇ.30 ಹಾಗೂ ರಾಜ್ಯ ಸರ್ಕಾರದಿಂದ ಶೇ.50ರಷ್ಟು ಸಬ್ಸಿಡಿ ದೊರೆಯುತ್ತದೆ ಎಂದರು.

25 ಸಾವಿರ ರೈತರು ಹೆಚ್ಚುವರಿಯಾಗಿ ಕುಸುಮ್ ಬಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದಾರೆ. ಯೋಜನೆಯಡಿ ರಾಜ್ಯ ಸರ್ಕಾರ 752 ಕೋಟಿ ರೂ. ವೆಚ್ಚ ಮಾಡಲಿದೆ. ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿದ ಬಳಿಕ ಸಬ್ಸಿಡಿ ಮೊತ್ತ ಕಡಿಮೆಯಾಗಲಿದೆ ಎಂದು ಅವರು ಹೇಳಿದರು.

4.5 ಲಕ್ಷ ಅನಧಿಕೃತ ಐಪಿ ಸೆಟ್‌ ಗಳಲ್ಲಿ 2 ಲಕ್ಷ ಐಪಿ ಸೆಟ್ ಸಂಪರ್ಕ ಅಧಿಕೃತಗೊಳಿಸಲಾಗಿದೆ. ಈ ಅನಧಿಕೃತ ಐಪಿ ಸೆಟ್‌ಗಳನ್ನು ಕುಸುಮ್ ಬಿ ಯೋಜನೆಯಡಿ ಆದ್ಯತೆ ಮೇಲೆಗೆ ತರುವ ಬಗ್ಗೆ ಚರ್ಚೆ ನಡೆಯಿತು.

ರೈತರಿಗೆ ಸ್ವಯಂ ವಿದ್ಯುತ್ ಮೂಲಸೌಕರ್ಯ ಕಲ್ಪಿಸಲು ಅವಕಾಶ ಕಲ್ಪಿಸಲಾಗುತ್ತಿದ್ದು, ಟ್ರಾನ್ಸ್‌ಫಾರ್ಮರ್‌ಗಳನ್ನು ಇಲಾಖೆ ಒದಗಿಸಲಿದೆ. ನೀರಾವರಿ ಪಂಪ್ ಸೆಟ್ ಗಳಿಗೆ 2024-25ರ ಸಾಲಿನಲ್ಲಿ 12785 ಕೋಟಿ ರೂಪಾಯಿಗಳ ಅನುದಾನ ಹಂಚಿಕೆ ಆಗಿದ್ದು ಫೆಬ್ರವರಿ 2025 ವರೆಗೆ ರೂ. 11720 ಕೋಟಿ ಬಿಡುಗಡೆ ಆಗಿದೆ. 2025-26ರಲ್ಲಿ 16021 ಕೋಟಿ ರೂ. ಆಯವ್ಯಯ ಹಂಚಿಕೆ ಆಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಇಂಧನ ಸಚಿವ ಕೆ ಜೆ ಜಾರ್ಜ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments