ಭಾರತ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ತವರಿನ ಹೊರಗೆ ಒಂದೇ ತಂಡದ ವಿರುದ್ಧ 1000 ರನ್ ಪೂರೈಸಿದ ವಿಶ್ವದ ಮೊದಲ ವಿಕೆಟ್ ಕೀಪರ್ ಎಂಬ ವಿಶ್ವದಾಖಲೆಗೆ ಪಾತ್ರರಾಗಿದ್ದಾರೆ.
ಮ್ಯಾಂಚೆ ಸ್ಟರ್ ನ ಓಲ್ಡ್ ಟ್ರಾಫೋರ್ಡ್ ನಲ್ಲಿ ಇಂಗ್ಲೆಂಡ್ ವಿರುದ್ಧ ಬುಧವಾರ ಆರಂಭಗೊಂಡ 4ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ನಿಯಮಿತವಾಗಿ ವಿಕೆಟ್ ಕಳೆದುಕೊಂಡಿತು.
ಪಂತ್ ಗಾಯಗೊಂಡು ನಿವೃತ್ತಿ ಆಗುವ ಮುನ್ನ 37 ರನ್ ಗಳಿಸಿದರು. ಈ ವೇಳೆ ಟೆಸ್ಟ್ ಕ್ರಿಕೆಟ್ ನಲ್ಲಿ ಇಂಗ್ಲೆಂಡ್ ವಿರುದ್ಧ 1000 ರನ್ ಬಾರಿಸಿದ ಮೊದಲ ವಿಕೆಟ್ ಕೀಪರ್ ಎಂಬ ದಾಖಲೆಗೆ ಪಾತ್ರರಾದರು.
ರಿಷಭ್ ಪಂತ್ ಇದಕ್ಕೂ ಮುನ್ನ ಆಸ್ಟ್ರೇಲಿಯಾ ವಿರುದ್ಧ 879 ರನ್ ಗಳಿಸಿದ ದಾಖಲೆ ಹೊಂದಿದ್ದು, ತಮ್ಮದೇ ದಾಖಲೆಯನ್ನು ಮುರಿದರು. ಭಾರತ ಚಹಾ ವಿರಾಮಕ್ಕೂ ಮುನ್ನವೇ ಮೊದಲ ಇನಿಂಗ್ಸ್ ನಲ್ಲಿ 217 ರನ್ ಗೆ 3 ವಿಕೆಟ್ ಕಳೆದುಕೊಂಡಿತು.


