Friday, May 15, 2026
Google search engine
Homeರಾಜ್ಯದರ್ಶನ್ ಗ್ಯಾಂಗ್ ಗೆ 10 ದಿನ ತಾತ್ಕಾಲಿಕ ರಿಲೀಫ್: ಜಾಮೀನು ರದ್ದು ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್

ದರ್ಶನ್ ಗ್ಯಾಂಗ್ ಗೆ 10 ದಿನ ತಾತ್ಕಾಲಿಕ ರಿಲೀಫ್: ಜಾಮೀನು ರದ್ದು ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್

ನಟ ದರ್ಶನ್ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದ್ದು, 10 ದಿನಗಳ ಕಾಲ ವಾದ ಸಲ್ಲಿಸಲು ಅವಕಾಶ ನೀಡಿದೆ.

ನಟ ದರ್ಶನ್ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದ್ದು, 10 ದಿನಗಳ ಕಾಲ ವಾದ ಸಲ್ಲಿಸಲು ಅವಕಾಶ ನೀಡಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ದರ್ಶನ್, ಗೆಳತಿ ಪವಿತ್ರಾ ಗೌಡ ಹಾಗೂ ಸಹಚರರಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಅಲ್ಲದೇ ಇತ್ತೀಚೆಗೆ ವಿದೇಶಕ್ಕೆ ತೆರಳಲು ಅನುಮತಿ ನೀಡಿತ್ತು.

ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಎರಡೂ ಕಡೆಯ ವಾದಗಳನ್ನು ಆಲಿಸಿದ್ದು, ವಾರದಲ್ಲಿ 3 ಪುಟಗಳ ಲಿಖಿತ ವಾದಾಂಶ ಸಲ್ಲಿಸಲು ದರ್ಶನ್ ಪರ ವಕೀಲರಿಗೆ ಸೂಚಿಸಿದೆ.

ದರ್ಶನ್ ಪರ ವಾದ ಮಂಡಿಸುತ್ತಿದ್ದ ಮನು ಸಿಂಘ್ವಿ ಮತ್ತು ಕಪಿಲ್ ಸಿಬಾಲ್ ಹಿಂದೆ ಸರಿದ ಕಾರಣ ದರ್ಶನ್ ಗೆ ವಿಚಾರಣೆಯಲ್ಲಿ ಹಿನ್ನಡೆ ಉಂಟಾಗಿದ್ದು, ಪ್ರಸ್ತುತ ಥಾಯ್ಲೆಂಡ್ ನಲ್ಲಿ ಡೆವಿಲ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ.

ಈ ಎಲ್ಲಾ ಅಂಶಗಳನ್ನು ಪರಿಗಣಿಸಿರುವ ಸುಪ್ರೀಂಕೋರ್ಟ್ 10 ದಿನಗಳ ಕಾಲ ತೀರ್ಪು ಕಾಯ್ದಿರಿಸಿದ್ದು, ಲಿಖಿತ ವಾದಾಂಶ ಪರಿಶೀಲಿಸಿದ ನಂತರ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments