Saturday, May 30, 2026
Google search engine
Homeರಾಜ್ಯಜು.26ಕ್ಕೆ ಪರಿಶಿಷ್ಟ ಜಾತಿ, ಪಂಗಡಗಳ ಕಲ್ಯಾಣ ಸಂಘ ಉದ್ಘಾಟನೆ

ಜು.26ಕ್ಕೆ ಪರಿಶಿಷ್ಟ ಜಾತಿ, ಪಂಗಡಗಳ ಕಲ್ಯಾಣ ಸಂಘ ಉದ್ಘಾಟನೆ

ಮೈಸೂರು: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳ ಮತ್ತು ನೌಕರರ ಕಲ್ಯಾಣ ಸಂಘ ಉದ್ಘಾಟನೆ ಹಾಗೂ ರಾಜ್ಯಮಟ್ಟದ ಸಮಾವೇಶವನ್ನು ಜು.26ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಿ.ಪ್ರಕಾಶ ತಿಳಿಸಿದರು.

ಮಾನಸಗಂಗೋತ್ರಿಯಲ್ಲಿರುವ ಸೆನೆಟ್ ಭವನದಲ್ಲಿಲ ಅಂದು ಬೆಳಗ್ಗೆ 10.30ಕ್ಕೆ ನಡೆಯಲ್ಲಿರುವ ಕಾರ್ಯಕ್ರಮದಲ್ಲಿ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯವಹಿಸುವರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸುವರು. ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಪುಷ್ಪಾರ್ಚನೆ ಮಾಡುವರು. ಸಂಘದ ರಾಜ್ಯಾಧ್ಯಕ್ಷ ಎಂ.ಸುರೇಶ್ ಕುಮಾರ್ ಅಧ್ಯಕ್ಷತೆ ವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮುಖ್ಯ ಅತಿಥಿಗಳಾಗಿ ಸಚಿವರಾದ ಡಾ.ಜಿ.ಪರಮೇಶ್ವರ್ , ಸತೀಶ್ ಜಾರಕಿಹೊಳಿ, ಕೆ.ಎಚ್.ಮುನಿಯಪ್ಪ, ಕೆ.ಎನ್.ರಾಜಣ್ಣ, ಶಿವರಾಜ್ ಎಸ್.ತಂಗಡಗಿ, ಆರ್.ಬಿ.ತಿಮ್ಮಾಪೂರ, ಸಂಸದರಾದ ಇ.ತುಕರಾಂ, ಸುನೀಲ್ ಬೋಸ್, ರಾಧಕೃಷ್ಣ ದೊಡ್ಡಮನಿ, ಶಾಸಕರಾದ ಪಿ.ಎನ್.ನರೇಂದ್ರಸ್ವಾಮಿ, ಶರತ್ ಬಚ್ಚೇಗೌಡ, ಅನಿಲ್ ಚಿಕ್ಕಮಾದು, ಎ.ಆರ್.ಕೃಷ್ಣಮೂರ್ತಿ, ದರ್ಶನ್ ಧ್ರುವನಾರಾಯಣ್, ಸಮೃದ್ಧಿ ಮಂಜುನಾಥ್, ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ಡಿ.ತಿಮ್ಮಯ್ಯ ಸೇರಿದಂತೆ ನಾನಾ ಇಲಾಖೆಗಳ ಅಧಿಕಾರಿಗಳು, ನಾನಾ ಸಂಘಟನೆಗಳು ಮುಖಂಡರು ಆಗಮಿಸುವರು ಎಂದರು.

ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಚಂದ್ರಕಾಂತ್‌, ಮಹದೇವನಾಯಕ, ಮಹದೇವ, ರಾಮದಾಸ್,ಅ ನಿಲ್‌ಕುಮಾರ್, ಮಹದೇವಸ್ವಾಮಿ, ಮತ್ತಿತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments