Sunday, May 31, 2026
Google search engine
Homeರಾಜ್ಯಹರಿಕಥೆ ವಿದ್ವಾನ್ ಎನ್.ಆರ್. ಜ್ಞಾನಮೂರ್ತಿ ನಿಧನ

ಹರಿಕಥೆ ವಿದ್ವಾನ್ ಎನ್.ಆರ್. ಜ್ಞಾನಮೂರ್ತಿ ನಿಧನ

ಬೆಂಗಳೂರು: ಕೀರ್ತನಕಾರರು ಮತ್ತು ಹರಿಕಥೆ ವಿದ್ಯಾನ್ ಎನ್.ಆರ್. ಜ್ಞಾನಮೂರ್ತಿ ಬೆಂಗಳೂರಿನಲ್ಲಿಂದು ನಿಧನರಾದರು.

ಮೂಲತಃ ಕೋಲಾರ ತಾಲ್ಲೂಕಿನ ರಾಮಸಂದ್ರದ ಅವರಿಗೆ 73 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಂದು ಮುಂಜಾನೆ ಎಂ.ಎಸ್. ರಾಮಯ್ಯ ರಾಮಯ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಅವಿವಾಹಿತರಾಗಿದ್ದ ಅವರು, ತಮ್ಮ ಜೀವನವನ್ನು ಹರಿಕಥೆಗಾಗಿಯೇ ಮೀಸಲಿಟ್ಟಿದ್ದರು. ಅವರಿಗೆ ಕರ್ನಾಟಕ ಕಲಾಶ್ರೀ, ಬಸವಶ್ರೀ, ಕುಮಾರ ವ್ಯಾಸ ಸೇರಿ ಹತ್ತು ಹಲವು ಪ್ರಶಸ್ತಿಗಳು ಸಂದಿವೆ. ಆಕಾಶವಾಣಿ ಮತ್ತು ದೂರದರ್ಶನದ ಕಲಾವಿದರಾಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದರು.

ಎನ್.ಆರ್. ಜ್ಞಾನಮೂರ್ತಿ ಅವರ ನಿಧನಕ್ಕೆ ಸುತ್ತೂರು ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸೇರಿ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments