71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ಇದೇ ಮೊದಲ ಬಾರಿ ಶ್ರೇಷ್ಠ ನಟ ಪ್ರಶಸ್ತಿಯನ್ನು ಶಾರೂಖ್ ಖಾನ್ ಮತ್ತು ವಿಕ್ರಾಂತ್ ಮಾಯೆಸ್ಸೆ ಹಂಚಿಕೊಂಡಿದ್ದಾರೆ.
2023ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ಜವಾನ್ ಚಿತ್ರದ ಅಭಿನಯಕ್ಕಾಗಿ ಶಾರೂಖ್ ಖಾನ್ ಮತ್ತು 12 ಫೇಲ್ ಚಿತ್ರದ ಅಭಿನಯಕ್ಕಾಗಿ ವಿಕ್ರಾಂತ್ ಮಾಯಸ್ಸೆ ಶ್ರೇಷ್ಠ ನಟ ಪ್ರಶಸ್ತಿ ಹಂಚಿಕೊಂಡಿದ್ದಾರೆ.
ರಣಭೀರ್ ಕಪೂರ್ ಅಭಿನಯದ ಅನಿಮಲ್ ಚಿತ್ರ ಶ್ರೇಷ್ಠ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ.
2023 ಜನವರಿ 1ರಿಂದ ಡಿಸೆಂಬರ್ 31ರವರೆಗೆ ಬಿಡುಗಡೆ ಆದ ಚಿತ್ರಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗಿದ್ದು, ಮಿಸೆಸ್ ಚಟರ್ಜಿ ವರ್ಸಸ್ ನಾರ್ವೆ ಚಿತ್ರದ ಅಭಿನಯಕ್ಕಾಗಿ ರಾಣಿ ಮುಖರ್ಜಿ ಶ್ರೇಷ್ಠ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.



