ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ 43 ಇನ್ ಸ್ಟಾಗ್ರಾಂ ಖಾತೆಗಳ ವಿರುದ್ಧ ರಮ್ಯಾ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಸೈಬರ್ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದು ಇಬ್ಬರನ್ನು ಬಂಧಿಸಿದ್ದು, ಒಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರು ಬಳ್ಳಾರಿ ಹಾಗೂ ಚಿತ್ರದುರ್ಗ ಮೂಲದ ಒಬ್ಬನನ್ನು ಬಂಧಿಸಲಾಗಿದ್ದು, ಬಂಧಿಸಿದ ವ್ಯಕ್ತಿಗಳು ದರ್ಶನ್ ಅಭಿಮಾನಿಗಳೇ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಉಳಿದ ಖಾತೆಗಳ ಮೇಲೆ ಗಮನ ಹರಿಸಿದ್ದಾರೆ.
ಇದೇ ವೇಳೆ ಪೊಲೀಸರು ಇಬ್ಬರನ್ನು ಬಂಧಿಸಿರುವ ಬಗ್ಗೆ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ, ಪೊಲೀಸರು ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ರಮ್ಯಾ ಇತ್ತೀಚೆಗೆ ರೇಣುಕಾಸ್ವಾಮಿ ಪ್ರಕರಣದಲ್ಲಿ ಕುಟುಂಬದವರಿಗೆ ನ್ಯಾಯ ಸಿಗುತ್ತದೆ ಎಂದು ಪೋಸ್ಟ್ ಮಾಡಿದ್ದರು. ಇದಕ್ಕೆ ಅಸಮಾಧಾನಗೊಂಡಿದ್ದ ದರ್ಶನ್ ಅಭಿಮಾನಿಗಳು ಅಶ್ಲೀಲ ಸಂದೇಶ ಕಳುಹಿಸಿ ಅಪಮಾನಿಸಿದ್ದರು.
ಇದನ್ನು ಸಹಿದದ ರಮ್ಯಾ ಹೋಗಿ ಸೈಬರ್ ಠಾಣೆಗೆ ದೂರು ದಾಖಲು ಮಾಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ ಸಿಸಿಬಿ ಸೈಬರ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.



