Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಜಿಲ್ಲಾ ಸುದ್ದಿ

ಪ್ರಧಾನಿ ಮೋದಿ ಅವರ 80 ಲಕ್ಷ ರೂ. ಬಿಲ್ ಬಾಕಿ ರಾಜ್ಯ ಸರ್ಕಾರದಿಂದ ಭರ್ತಿ: ಸಚಿವ ಈಶ್ವರ ಖಂಡ್ರೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 28 ವೀಕ್ಷಣೆಗಳು
pm-modi
pm-modi

ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023 ಏಪ್ರಿಲ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ, ರಾಷ್ಟ್ರಪತಿ ಮೊದಲಾದ ಗಣ್ಯರು ಆಗಮಿಸಿದಾಗ ಆತಿಥ್ಯ ನೀಡುವುದು ರಾಜ್ಯ ಸರ್ಕಾರದ ಸಂಪ್ರದಾಯವಾಗುತ್ತದೆ. ಆದರೆ ಕಳೆದ ವರ್ಷ ಏಪ್ರಿಲ್ ನಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿತ್ತು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ರಾಜ್ಯ ಸರ್ಕಾರ ಈ ಕಾರ್ಯಕ್ರಮದ ಆಯೋಜನೆಯಲ್ಲಿ ಯಾವುದೇ ಪಾತ್ರ ವಹಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲು ರಾಜ್ಯ ಸರ್ಕಾರವೇ ಮೈಸೂರಿನ ರಾಡಿಸನ್ ಬ್ಲೂ ಹೊಟೆಲ್ ಬಿಲ್ ಬಾಕಿ ಪಾವತಿಸಲು ನಿರ್ಧರಿಸಿದೆ ಎಂದು ತಿಳಿಸಿದರು.

2023ರ ಏಪ್ರಿಲ್ ನಲ್ಲಿ ನಡೆದ ಕಾರ್ಯಕ್ರಮವನ್ನು ಸಂಪೂರ್ಣವಾಗಿ ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರವೇ ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಒಟ್ಟಾರೆ 6 ಕೋಟಿ 33 ಲಕ್ಷ ರೂ. ವೆಚ್ಚವಾಗಿದ್ದು, ಎನ್.ಟಿ.ಸಿ.ಎ. ರಾಜ್ಯಕ್ಕೆ 3 ಕೋಟಿ ರೂ. ಪಾವತಿಸಿದೆ. ಉಳಿದ ಹಣ ಪಾವತಿಸಿಲ್ಲ. ಹೀಗಾಗಿ ಮೈಸೂರಿನ ರಾಡಿಸನ್ ಬ್ಲೂ ಹೊಟೆಲ್ ನವರು ಕಾರ್ಯಕ್ರಮದ ಆಯೋಜನೆಗೆ ಸ್ಥಳೀಯ ಬೆಂಬಲ ನೀಡಿದ್ದ ಅರಣ್ಯ ಇಲಾಖೆಗೆ ಪತ್ರ ಬರೆದಿದ್ದಾರೆ ಎಂದರು.

ರಾಜ್ಯ ಸರ್ಕಾರವೇ ಆತಿಥ್ಯದ 80 ಲಕ್ಷ ರೂ. ಹಣ ಪಾವತಿಸುವ ಮೂಲಕ ವಿವಾದಕ್ಕೆ ತೆರೆ ಎಳೆಯಲಿದೆ ಎಂದು ತಿಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment