Wednesday, May 13, 2026
Google search engine
Homeರಾಜ್ಯರಾಜ್ಯದಲ್ಲಿ ಮಹಿಳೆಯರ ರಕ್ಷಣೆಗೆ ಅಕ್ಕ ಪಡೆ ಜಾರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

ರಾಜ್ಯದಲ್ಲಿ ಮಹಿಳೆಯರ ರಕ್ಷಣೆಗೆ ಅಕ್ಕ ಪಡೆ ಜಾರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಸುರಕ್ಷತೆಗಾಗಿ ರಾಜ್ಯದಲ್ಲಿ ಮಹಿಳಾ ಪೊಲೀಸ್ ಒಳಗೊಂಡ ಅಕ್ಕ ಪಡೆ ಶೀಘ್ರವೇ ಜಾರಿಗೆ ಬರಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಿಸಿದ್ದಾರೆ.

ವಿಧಾನಸಭೆ ಕಲಾಪದಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸುರೇಶ್ ಬಾಬು ಕೇಳಿದ ಪ್ರಶ್ನೆಗೆ ಮಂಗಳವಾರ ಉತ್ತರ ನೀಡಿದ ಅವರು, ಈಗಾಗಲೇ ಬೀದರ್ ಜಿಲ್ಲೆಯಲ್ಲಿ ಅಕ್ಕ ಪಡೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅಗಸ್ಟ್ 15ರಿಂದ ಬೆಳಗಾವಿ, ಮೈಸೂರು ಹಾಗೂ ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಅಕ್ಕ ಪಡೆ ಆರಂಭಿಸಲಾಗುತ್ತಿದೆ ಎಂದರು.

ಕೆಲವು ಸಮುದಾಯ ಮತ್ತು ಪಂಗಡಗಳಲ್ಲಿ ಬಾಲ್ಯವಿವಾಹಗಳು ನಡೆಯುತ್ತಿದ್ದು, ಬಾಲಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದೆ. ಬಾಲ್ಯವಿವಾಹ ಸಾಮಾಜಿಕ ಪಿಡುಗಾಗಿದ್ದು, ಇದನ್ನು ಬೇರುಮಟ್ಟದಿಂದ ಕಿತ್ತೊಗೆಯಬೇಕು. ಬಾಲ್ಯವಿವಾಹ ತಡೆಗಟ್ಟಲು ಸರ್ಕಾರ ಸರ್ವಸನ್ನದ್ಧವಾಗಿದ್ದು, ಎಲ್ಲರ ಸಹಕಾರವೂ ಅಗತ್ಯ ಎಂದು ಹೇಳಿದರು.

ಬಾಲ್ಯವಿವಾಹ ತಡೆಗಟ್ಟಲು ಸರ್ಕಾರ ಈಗಾಗಲೇ ಕಾಯ್ದೆ ಜಾರಿಗೆ ತಂದಿದೆ. ನಮ್ಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಮಕ್ಕಳ ರಕ್ಷಣಾ ಸಮಿತಿ ಕಾರ್ಯನಿರ್ವಹಿಸುತ್ತಿದ್ದು, ಬೆಂಗಳೂರಿನಲ್ಲಿ 4 ಕೇಂದ್ರಗಳು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ತಲಾ ಒಂದು ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.

ಮಕ್ಕಳ ಸುರಕ್ಷತೆಗಾಗಿ ಮಕ್ಕಳ ಸಹಾಯವಾಣಿ 1098 ಸಂಖ್ಯೆಯೂ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ. ಸಂಕಷ್ಟದಲ್ಲಿರುವ ಮಗುವಿನ ಬಗ್ಗೆ ಯಾವುದೇ ಸಮಯದಲ್ಲಿ ಕರೆ ಬಂದರೂ ತಕ್ಷಣ ಮಗುವನ್ನು ರಕ್ಷಿಸಲು ಅಧಿಕಾರಿಗಳು ಕಾರ್ಯ ಪ್ರವೃತ್ತರಾಗುತ್ತಾರೆ. ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗಾಗಿ ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ಕಾವಲು ಸಮಿತಿನ್ನು ರಚಿಸಲಾಗಿದೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments