Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ರಾಜ್ಯ

ರಜೆ ವೇತನ ಪಾವತಿಗೆ ಲಂಕ ಪಡೆದಿದ್ದ ಆರೋಗ್ಯ ಇಲಾಖೆಯ ಇಬ್ಬರಿಗೆ 4 ವರ್ಷ ಜೈಲು, 10 ಸಾವಿರ ದಂಡ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 21 ವೀಕ್ಷಣೆಗಳು
lokayukta

ಗದಗ: ಕಿರಿಯ ಮಹಿಳಾ ಆರೋಗ್ಯ ಸಹಾಯಕಿಗೆ ವೈದ್ಯಕೀಯ ರಜೆ ಅವಧಿಯಲ್ಲಿನ ವೇತನ ಪಾವತಿಸಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಇಬ್ಬರು ಆರೋಗ್ಯ ಇಲಾಖೆ ಸಿಬ್ಬಂದಿಗೆ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ಆದೇಶಿಸಿದೆ.

ಆರೋಪಿಗಳಾದ ಶಿರಹಟ್ಟಿ ತಾಲೂಕಿನ ಯಳವತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ದರ್ಜೆ ಸಹಾಯಕ ಮಲ್ಲಿಕಾರ್ಜುನ ಫಕ್ಕೀರಪ್ಪ ಕಲ್ಲಬಂಡಿ ಹಾಗೂ ಕಿರಿಯ ಪುರುಷ ಆರೋಗ್ಯ ಸಹಾಯಕ ವೀರಪ್ಪ ಮಲ್ಲಪ್ಪ ಕುರಿ ಅವರಿಗೆ ಶಿಕ್ಷೆ ವಿಧಿಸಲಾಗಿದೆ.

ಪ್ರಕರಣದ ವಿವರ: ಶಿರಹಟ್ಟಿ ತಾಲೂಕಿನ ಯಳವತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಚಾಂದಬೀಬಿ ಎಂಬುವವರು 2010ರ ಮಾ. 1ರಿಂದ ಜು. 24ರ ವರೆಗೆ ವೈದ್ಯಕೀಯ ರಜೆ ಪಡೆದಿದ್ದರು.

ವೈದ್ಯಕೀಯ ರಜೆ ಅವಧಿಯಲ್ಲಿನ ವೇತನವನ್ನು ಪಾವತಿಸಲು ಹಾಗೂ ಸೇವಾ ಪುಸ್ತಕ ಮತ್ತು ಎಲ್‌ಪಿಸಿಯನ್ನು ವರ್ಗಾವಣೆಯಾದ ಸ್ಥಳಕ್ಕೆ ಕಳುಹಿಸಲು ಆರೋಪಿಗಳಾದ ಶಿರಹಟ್ಟಿ ತಾಲೂಕಿನ ಯಳವತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ದರ್ಜೆ ಸಹಾಯಕ ಮಲ್ಲಿಕಾರ್ಜುನ ಫಕ್ಕೀರಪ್ಪ ಕಲ್ಲಬಂಡಿ ಹಾಗೂ ಕಿರಿಯ ಪುರುಷ ಆರೋಗ್ಯ ಸಹಾಯಕ ವೀರಪ್ಪ ಮಲ್ಲಪ್ಪ ಕುರಿ ಅವರು ಸತಾಯಿಸಿದ್ದಾರೆ.

ಅಲ್ಲದೇ, ಚಾಂದಬೀಬಿ ಅವರ ಗೈರಯ ಹಾಜರಿಯ ವೇತನ 63,003 ರೂ. ಹಣವನ್ನು ಮಲ್ಲಿಕಾರ್ಜುನ ಫಕ್ಕೀರಪ್ಪ ಕಲ್ಲಬಂಡಿ ಡ್ರಾ ಮಾಡಿಕೊಂಡು, ಅದರಲ್ಲಿ ತಮ್ಮ ಖರ್ಚು ಎಂದು 13,500 ರೂ. ಹಣ ತೆಗೆದುಕೊಂಡು ಉಳಿದ ಹಣವನ್ನು ಪೇ ಬಿಲ್‌ನ್ನು ಕಿರಿಯ ಪುರುಷ ಆರೋಗ್ಯ ಸಹಾಯಕ ವೀರಪ್ಪ ಮಲ್ಲಪ್ಪ ಕುರಿಗೆ ನೀಡಿದ್ದಾನೆ. ಅ ಹಣದಲ್ಲಿ ವೀರಪ್ಪ ತನ್ನ ಖರ್ಚು ಎಂದು 21,000 ರೂ. ಕಡಿತ ಮಾಡಿಕೊಂಡು ಉಳಿದ ಹಣವನ್ನು ಕೊಡುತ್ತೇನೆ.

ಪೇ ಬಿಲ್‌ಗೆ ಸಹಿ ಮಾಡಿ ಎಂದು ತಿಳಿಸಿದ್ದಾನೆ. ಈ ವೇಳೆ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಚಾಂದಬೀಬಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿತ್ತು.

ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯವು ವಾದ-ಪ್ರತಿವಾದಗಳನ್ನು ಆಲಿಸಿ ಇಬ್ಬರು ಆರೋಪಿಗಳಿಗೆ ಕಲಂ 7 ಸಹ ಕಲೋ 13(2) ಲಂಚ ಪ್ರತಿಬಂಧ ಕಾಯ್ದೆ 1988ರ ಅನ್ವಯ 4 ವರ್ಷ ಕಠಿಣ ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ಆದೇಶಿಸಿದೆ. ವಿಶೇಷ ಸರಕಾರಿ ಅಭಿಯೋಜಕರಾಗಿ ಎಂ.ಎA. ಶಿಗ್ಲಿ ಅವರು ವಾದ ಮಂಡಿಸಿದ್ದಾರೆ ಎಂದು ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಗದಗ ಜಿಲ್ಲಾ ಪೋಲಿಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment