Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ರಾಜ್ಯ

ಪಿಓಪಿ ಬಳಸಲ್ಲ ಎಂದು ಮುಚ್ಚಳಿಕೆ ಕೊಟ್ಟರೆ ಮಾತ್ರ ಗಣೇಶೋತ್ಸವಕ್ಕೆ ಅನುಮತಿ: ಸಚಿವ ಈಶ್ವರ ಖಂಡ್ರೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 4 ವೀಕ್ಷಣೆಗಳು
pop ganesha

ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಓಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಗಣೇಶೋತ್ಸವ ಸಮಿತಿಗಳಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಶ್ರದ್ಧಾಭಕ್ತಿಯಿಂದ ಆಚರಿಸುವ ಗಣೇಶೋತ್ಸವದಿಂದ ಜಲಚರಗಳಿಗೆ ಮಾರಕವಾಗಬಾರದು. ಈ ನಿಟ್ಟಿನಲ್ಲಿ ಗಣೇಶೋತ್ಸವ ಸಮಿತಿಗಳು ಮತ್ತು ಸಾರ್ವಜನಿಕರು ಪಿಓಪಿ ಗಣಪತಿ ಮೂರ್ತಿಗಳನ್ನು ಖರೀದಿಸದೆ, ಪರಿಸರ ಸ್ನೇಹಿಯಾದ ಮಣ್ಣಿನ ಗಣಪತಿ ಮೂರ್ತಿಗಳನ್ನೇ ಪೂಜಿಸಿ, ವಿಸರ್ಜಿಸುವಂತೆ ಮನವಿ ಮಾಡಿದರು.

3 ಜಿಲ್ಲೆಯಲ್ಲಿ ಪರಿಸರ ಗಣಪ:

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶೇ.90ರಷ್ಟು ಮಣ್ಣಿನ ಗಣಪತಿಯನ್ನೇ ಪೂಜಿಸುತ್ತಾರೆ. ಆ ಮೂರು ಜಿಲ್ಲೆಗಳಲ್ಲಿ ಸಾಧ್ಯವಾಗುವುದಾದರೆ ಉಳಿದ ಜಿಲ್ಲೆಗಳಲ್ಲಿ ಏಕೆ ಆಗುವುದಿಲ್ಲ. ಈ ಬಗ್ಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಸ್ಥಳೀಯ ಸಂಸ್ಥೆಗಳು ಜಾಗೃತಿ ಮೂಡಿಸಬೇಕು ಎಂದು ಅಭಿಪ್ರಾಯಪಟ್ಟರು.

ಪಿಓಪಿ ಗೌರಿ ಗಣೇಶ ಮೂರ್ತಿಗಳು ನೀರಲ್ಲಿ ಕರಗುವುದಿಲ್ಲ. ಜೊತೆಗೆ ವಿಷಕಾರಕ ಅಂಶಗಳನ್ನು ನೀರಿನಲ್ಲಿ ಸೇರಿಸುತ್ತವೆ. ಜೊತೆಗೆ ಅದಕ್ಕೆ ಲೇಪಿಸುವ ಭಾರಲೋಹ ಮಿಶ್ರಿತ ರಾಸಾಯನಿಕ ಬಣ್ಣಗಳು ನೀರಲ್ಲಿ ಕರಗಿ ಜಲಚರಗಳ ಸಾವಿಗೆ ಕಾರಣವಾಗುತ್ತವೆ ಎಂದು ಹೇಳಿದರು.

ಬೆಂಗಳೂರು ನಗರ ಸೇರಿದಂತೆ ರಾಜ್ಯದ ಅನೇಕ ಪಟ್ಟಣ, ನಗರಗಳಲ್ಲಿ ಸಮುಚ್ಚಯಗಳಿವೆ. ಇವುಗಳಲ್ಲಿ ಸಂಘಗಳು ಇರುತ್ತವೆ. ಅವರಿಗೆ ಮನವಿ ಮಾಡಿ ಮಣ್ಣಿನ ಗಣಪ ಪೂಜಿಸುವಂತೆ ಎಲ್ಲರಿಗೂ ಸಂದೇಶ ಕಳಿಸುವಂತೆ ಮತ್ತು ಶಾಲಾ, ಕಾಲೇಜು ಮಕ್ಕಳಲ್ಲಿ ಪರಿಸರ ಸ್ನೇಹಿ ಗಣಪನ ಮೂರ್ತಿ ಪೂಜಿಸುವ ಬಗ್ಗೆ ಅರಿವು ಮೂಡಿಸುವಂತೆ ಸೂಚಿಸಲಾಗಿದೆ ಎಂದರು.

ಹಸಿರು ಪಟಾಕಿಗೆ ಮಾತ್ರ ಅವಕಾಶ:

ಗಣೇಶೋತ್ಸವದ ಮೆರವಣಿಗೆಯಲ್ಲಿ ಪಟಾಕಿಯನ್ನೂ ಹಚ್ಚಲಾಗುತ್ತದೆ. ಸುಪ್ರೀಂಕೋರ್ಟ್ 125 ಡೆಸಿಬಲ್ ಗಿಂತ ಹೆಚ್ಚು ಶಬ್ದ ಮಾಡುವ ಪಟಾಕಿ ಸಿಡಿಸದಂತೆ ಮತ್ತು ರಾತ್ರಿ 8ರಿಂದ 10ಗಂಟೆಯೊಳಗೆ ಮಾತ್ರ ಪಟಾಕಿ ಸಿಡಿಸುವಂತೆ ಆದೇಶ ನೀಡಿದ್ದು, ಎಲ್ಲರೂ ಈ ನಿಯಮ ಪಾಲಿಸಬೇಕು. ಪರಿಸರಕ್ಕೆ ಮಾರಕವಾದ ಪಟಾಕಿ ಬಳಸದೆ ಹಸಿರು ಪಟಾಕಿ ಸಿಡಿಸಬೇಕು ಎಂದು ಮನವಿ ಮಾಡಿದರು.

ಏಕ ಬಳಕೆ ಪ್ಲಾಸ್ಟಿಕ್ ನಿಷೇಧ:

ಮಣ್ಣಲ್ಲಿ ಮಣ್ಣಾಗದ, ನೀರಲ್ಲಿ ಕರಗದ ಮತ್ತು ಸುಟ್ಟರೆ ಗಾಳಿಗೆ ವಿಷಕಾರಕ ಅಂಶ ಸೇರಿಸುವ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನ ನಿಷೇಧಿಸಲಾಗಿದೆ. ಆದರೂ ಹಾದಿ ಬೀದಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನೋಡುತ್ತೇವೆ. ಈ ಬಗ್ಗೆ ಜಾಗೃತಿ ಅಗತ್ಯ. ಸ್ಥಳೀಯ ಸಂಸ್ಥೆಗಳು ಹೆಚ್ಚು ಪರಿಣಾಮಕಾರಿಯಾಗಿ ಈ ಸಮಸ್ಯೆ ಪರಿಹರಿಸಬೇಕು ಎಂದರು.

ಇಂದು ಇಡೀ ವಿಶ್ವ ಎದುರಿಸುತ್ತಿರುವ ದೊಡ್ಡ ಸವಾಲು ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆ ಆಗಿದೆ. ತಾಪಮಾನ ಏರಿಕೆಯಿಂದ ಒಂದು ತಿಂಗಳಲ್ಲಿ ಬೀಳುವ ಮಳೆ ಒಂದು ವಾರದಲ್ಲಿ, ಒಂದು ವಾರದ ಮಳೆ ಒಂದೇ ದಿನ ಬೀಳುತ್ತಿದ್ದು, ಅತಿವೃಷ್ಟಿಯಿಂದ ಅನಾಹುತ ಸಂಭವಿಸುತ್ತಿದೆ. ಹೀಗಾಗಿ ಇರುವ ಒಂದು ಭೂಮಿಯನ್ನು ರಕ್ಷಿಸುವ ಹೊಣೆ ನಮ್ಮ ನಿಮ್ಮಲ್ಲರ ಮೇಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment