Monday, 16 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಅಪರಾಧ

ಚಿಕ್ಕಬಳ್ಳಾಪುರ: ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದ ಹಂತಕರು 6 ವರ್ಷ ನಂತರ ಅರೆಸ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 32 ವೀಕ್ಷಣೆಗಳು
kidnap case

ಚಿಕ್ಕಬಳ್ಳಾಪುರ: ಯುವಕನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದ ಪ್ರಕರಣವನ್ನು 6 ವರ್ಷಗಳ ನಂತರ ಭೇದಿಸಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು 5 ಮಂದಿಯನ್ನು ಬಂಧಿಸಿದ್ದಾರೆ.

2019, ಮೇ 12ರಂದು ನಡೆದಿದ್ದ 27 ವರ್ಷದ ಗಿರೀಶ್ ಎಂಬಾತನ ಕೊಲೆ ಪ್ರಕರಣದ 6ಆರೋಪಿಗಳ ಪೈಕಿ ಐವರನ್ನು ಬಂಧಿಸಲಾಗಿದ್ದು, ಓರ್ವ ನಾಪತ್ತೆ ಆಗಿದ್ದಾನೆ. ದಿವಾಕರ್, ಹರೀಶ್​, ಮಾರ್ತಾಂಡ ಅಲಿಯಾಸ್​ ಆಟೋ ಚಂದ್ರ, ರಂಜೀತ್​ ಕುಮಾರ್, ಮಂಜುನಾ ಅಲಿಯಾಸ್​ ಕಬಾಬ್ ಮಂಜು ಬಂಧಿತರು.

ಸದ್ಯ ಆರೋಪಿಗಳನ್ನು ಬಂಧಿಸುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಗಿರೀಶ್ (27) ಕೊಲೆ ರಹಸ್ಯ ಬಯಲು ಮಾಡಿದ್ದಾರೆ. ಮೃತ ಗಿರೀಶ್​ ಶಿಡ್ಲಘಟ್ಟ ನಗರದ ನಿವಾಸಿ. ಆಟೊ ಚಾಲಕನಾಗಿದ್ದ. ಹಳೆ ದ್ವೇಷ ಹಿನ್ನಲೆ 2019 ಮೇ 12 ರಂದು ಗಿರೀಶ್​ ನನ್ನು ಕೊಲೆ ಮಾಡಲಾಗಿತ್ತು. ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ಕೂಡ ದಾಖಲಾಗಿತ್ತು.

ಶಿಡ್ಲಘಟ್ಟದಿಂದ ಕಿಡ್ಯ್ನಾಪ್ ಮಾಡಿ ನರಸಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಮಾಡಿದ್ದ ಆರೋಪಿಗಳು ಬಳಿಕ ಶವವನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ತಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿಲಿಪಿಲಿ ಮಂಗಲ ಗ್ರಾಮದ ಬಳಿ ಬಿಸಾಡಿದ್ದರು. ತಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣ ಕೂಡ ದಾಖಲಾಗಿತ್ತು.

ತನಿಖೆ ನಡೆಸಿದ್ದ ತಳಿ ಠಾಣೆಯ ಪೊಲೀಸರು ನಾಲ್ವರನ್ನು ಬಂಧಿಸಿದ್ದರು. ಆದರೆ ಸರಿಯಾದ ಸಾಕ್ಷ್ಯಾಧಾರ ಕೊರತೆ ಮತ್ತು ಚಾರ್ಜ್​ಶೀಟ್ ಸಲ್ಲಿಸಿರಲಿಲ್ಲ. ಹೀಗಾಗಿ ಕೋರ್ಟ್​​ ಬಂಧಿತ ಆರೋಪಿಗಳನ್ನು ಜಾಮೀನು ಮೇಲೆ ಬಿಡುಗಡೆ ಮಾಡಿತ್ತು. ಈ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯ ಆರೋಪ ಕೇಳಿಬಂದಿತ್ತು. ಕೇಸ್​​ ಹಾಗೇ ಉಳಿದುಕೊಂಡಿತ್ತು. ಬಳಿಕ ಬೇರೆ ಅಧಿಕಾರಿಗಳ ಗಮನಕ್ಕೆ ಬಂದು ಪ್ರಕರಣವನ್ನು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರಿಗೆ ವರ್ಗಾಯಿಸಲಾಗಿತ್ತು. ಅದರಂತೆ ಇದೀಗ ಐವರ ಬಂಧನವಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment