Monday, May 25, 2026
Google search engine
Homeಅಪರಾಧಬಾಯಲ್ಲಿ ಜಿಲೆಟಿನ್ ಕಡ್ಡಿ ಸ್ಫೋಟಿಸಿ ಪ್ರೇಯಸಿ ಕೊಂದು ಮೊಬೈಲ್ ಸ್ಫೋಟದ ಕಥೆ ಕಟ್ಟಿದ ಪ್ರಿಯಕರ!

ಬಾಯಲ್ಲಿ ಜಿಲೆಟಿನ್ ಕಡ್ಡಿ ಸ್ಫೋಟಿಸಿ ಪ್ರೇಯಸಿ ಕೊಂದು ಮೊಬೈಲ್ ಸ್ಫೋಟದ ಕಥೆ ಕಟ್ಟಿದ ಪ್ರಿಯಕರ!

ಪ್ರೇಯಸಿಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಕೊಲೆ ಮಾಡಿದ ಪ್ರಿಯಕರ ಮೊಬೈಲ್ ಸ್ಫೋಟದಿಂದ ಮೃತಪಟ್ಟಿದ್ದಾಳೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಸಾಲಿಗ್ರಾಮ ತಾಲೂಕಿನ ಬೇರ್ಯ ಗ್ರಾಮದಲ್ಲಿ ಹುಣಸೂರು ತಾಲೂಕಿನ ಗೆರಸನಹಳ್ಳಿ ಗ್ರಾಮದ ರಕ್ಷಿತಾ (20) ಪ್ರಿಯಕರ ವಿಕೃತಿಗೆ ಬಲಿಯಾಗಿದ್ದಾರೆ. ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ ಪಿರಿಯಾಪಟ್ಟಣದ ಬಿಳಿಕೆರೆ ಗ್ರಾಮದ ಸಿದ್ದರಾಜುನನ್ನು ಬಂಧಿಸಲಾಗಿದೆ.

ಕೇರಳದ ವ್ಯಕ್ತಿಯನ್ನು ಮದುವೆಯಾಗಿದ್ದ ರಕ್ಷಿತಾ, ಸಿದ್ದರಾಜು ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು ಎಂದು ತಿಳಿದುಬಂದಿದೆ.

ಮಹಿಳೆ ಕಪ್ಪಡಿ ಕ್ಷೇತ್ರಕ್ಕೆ ಹೋಗೋಣ ಎಂದು ಕರೆದಿದ್ದಳು. ಬಳಿಕ ಲಾಡ್ಜ್‍ನಲ್ಲಿ ಇಬ್ಬರು ತಂಗಿದ್ದರು. ಈ ವೇಳೆ, ಆಕೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ ಮಾಡಿದ್ದಾನೆ. ಬಳಿಕ ಮೊಬೈಲ್ ಸ್ಫೋಟಗೊಂಡು ಸಾವನ್ನಪ್ಪಿದ್ದಾಳೆ ಎಂದು ಕಥೆ ಕಟ್ಟಿದ್ದ.

ಸ್ಥಳದಲ್ಲಿ ಯಾವುದೇ ಮೊಬೈಲ್ ಇಲ್ಲದ ಕಾರಣ ಲಾಡ್ಜ್‌ ಸಿಬ್ಬಂದಿಗೆ ಅನುಮಾನ ಬಂದಿತ್ತು. ಬ್ಲಾಸ್ಟ್ ಆದ ಮೊಬೈಲ್ ಎಲ್ಲಿ ಎಂದಿದ್ದಕ್ಕೆ ಹೊರಗೆ ಬಿಸಾಡಿದ್ದಾಗಿ ಸುಳ್ಳು ಹೇಳಿ ಪರಾರಿಯಾಗಲು ಯತ್ನಿಸಿದ್ದ. ಅನುಮಾನ ಬಂದು ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಫೋನ್ ಮಾಡಿದ್ದರು.

ಸ್ಥಳಕ್ಕೆ ಬಂದ ಪೊಲೀಸರ ಬಳಿ ಅಸಲಿ ವಿಷಯವನ್ನು ಸಿದ್ದರಾಜು ಹೇಳಿದ್ದಾನೆ. ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments