ನಾವಿಬ್ಬರು, ನಮಗೆ ಮೂವರು ಎಂಬಂತೆ ಪ್ರತಿಯೊಂದು ಕುಟುಂಬಗಳು ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ.
ಆರೆಸ್ಸೆಸ್ ಶತಮಾನೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮಹಿಳೆಯರ ಸಂತಾನೋತ್ಪತ್ತಿ ಪ್ರಮಾಣ 2.1 ಇಳಿಕೆಯಾಗಿರುವ ಬಗ್ಗೆ ಪ್ರಸ್ತಾಪಿಸಿದ ಅವರು, ಪ್ರತಿಯೊಂದು ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದರು.
ಭಾರತದಲ್ಲಿ ಮಾತ್ರವಲ್ಲ, ಜಗತ್ತಿನ ಹಲವು ದೇಶಗಳಲ್ಲಿ ಈ ಸಮಸ್ಯೆ ಎದುರಿಸುತ್ತಿದ್ದು, ಕನಿಷ್ಠ 3 ಮಕ್ಕಳನ್ನು ಹೊಂದುವತ್ತ ಕುಟುಂಬಗಳು ಪ್ರಯತ್ನಿಸಬೇಕು ಎಂದು ಅವರು ಹೇಳಿದರು.
ಸರಿಯಾದ ಸಮಯದಲ್ಲಿ ಮದುವೆ ಆಗಿ ಮಕ್ಕಳನ್ನು ಹೊಂದುವುದರಿಂದ ಆರೋಗ್ಯವೂ ಉತ್ತಮವಾಗಿರುತ್ತದೆ ಎಂದು ವೈದ್ಯರು ನನಗೆ ಹೇಳಿದ್ದಾರೆ. ಅಲ್ಲದೇ ಮೂರು ಮಕ್ಕಳು ಇದ್ದರೆ ಮಕ್ಕಳು ಅಹಂಕಾರವನ್ನು ನಿಭಾಯಿಸುವುದನ್ನು ಕಲಿಯುತ್ತಾರೆ ಎಂದು ಅವರು ಹೇಳಿದರು.
ನಮ್ಮ ದೇಶದಲ್ಲಿ ಸಂತಾನೋತ್ಪತ್ತಿ ಪ್ರಮಾಣ 2.1ರಷ್ಟಿದೆ. ಇದು ಒಳ್ಳೆಯ ಪ್ರಮಾಣವೇ ಆದರೆ ಲೆಕ್ಕಾಚಾರದಲ್ಲಿ 2 ಅಷ್ಟೇ ಲೆಕ್ಕಕ್ಕೆ ಬರುತ್ತದೆ. ಮೂರು ಮಕ್ಕಳನ್ನು ಹೊಂದಿದರೆ 2.1 ಆಗುತ್ತದೆ ಎಂದು ಅವರು ವಿಶ್ಲೇಷಿಸಿದರು.
ಕೇಂದ್ರ ಸರ್ಕಾರದ ಜೊತೆ ಭಿನ್ನಾಭಿಪ್ರಾಯ ಇರುವುದು ನಿಜ. ಆದರೆ ಅಸಮಾಧಾನ ಇಲ್ಲ, ಆರ್ ಎಸ್ ಎಸ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜೊತೆ ಉತ್ತಮ ಸಂಬಂಧಗಳನ್ನು ಹೊಂದಿದೆ. ಆರ್ ಎಸ್ ಎಸ್ ಕೇವಲ ಬಿಜೆಪಿಗಾಗಿ ಕೆಲಸ ಮಾಡುತ್ತದೆ ಎಂಬ ಭಾವನೆ ತಪ್ಪು ಎಂದು ಅವರು ಸ್ಪಷ್ಟನೆ ನೀಡಿದರು.


