Tuesday, 17 November 2026 — Kannadavahini
BREAKING NEWS
ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ
ದೇಶ

ಟ್ರಂಪ್ ಶೇ.50 ತೆರಿಗೆ ಹೊಡೆತದ ನಡುವೆಯೂ ಭಾರತದ ಜಿಡಿಪಿ 3 ತಿಂಗಳಲ್ಲಿ ಶೇ 7.8ಕ್ಕೆ ಜಿಗಿತ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 25 ವೀಕ್ಷಣೆಗಳು
gdp

ನವದೆಹಲಿ: ಭಾರತದ ಒಟ್ಟಾರೆ ರಾಷ್ಟ್ರೀಯ ಉತ್ಪನ್ನ( ಜಿಡಿಪಿ) ಬೆಳವಣಿಗೆ ಕಳೆದ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ನಿರೀಕ್ಷೆ ಮೀರಿ ಅಚ್ಚರಿಯ ರೀತಿಯಲ್ಲಿ ಹೊಸ ಎತ್ತರಕ್ಕೇರಿದೆ.

ಈ ಮೂರು ತಿಂಗಳಿನಲ್ಲಿ 7.8% ಬೆಳವಣಿಗೆಯು ದಾಖಲಾಗಿದೆ ಎಂದು ರಾಷ್ಟ್ರೀಯ ಅಂಕಿ ಅಂಶಗಳ ಕಚೇರಿಯು ಬಿಡುಗಡೆಗೊಳಿಸಿದ ಮಾಹಿತಿಯಿಂದ ತಿಳಿದು ಬಂದಿದೆ.

ನಿರ್ಮಾಣ ವಲಯ ಮತ್ತು ಕೃಷಿ ಕ್ಷೇತ್ರದಲ್ಲಿ ಭಾರಿ ಬೆಳವಣಿಗೆ ಆಗಿರುವುದು, ಕೇಂದ್ರ ಸರಕಾರದ ಬಂಡವಾಳ ಹೆಚ್ಚ ಗಣನೀಯ ಹೆಚ್ಚಳವಾಗಿರುವುದು ಪ್ರಭಾವ ಬೀರಿದೆ.

ವಿಮಾನಗಳ ಮೂಲಕ ಸರಕುಗಳ ಸಾಗಣೆಯಲ್ಲಿ ಹೆಚ್ಚಳವಾಗಿದೆ. ಜಿಎಸ್ ಟಿ ಸಂಗ್ರಹದಲ್ಲೂ ದಾಖಲೆಯ ಏರಿಕೆಯಾಗಿದೆ. ಹೀಗಾಗಿ ಜಾಗತಿಕ ವಾಣಿಜ್ಯ ವಲಯದ ಅನಿಶ್ಚಿತತೆಯ ನಡುವೆಯೂ ಭಾರತದ ಜಿಡಿಪಿ ವೃದ್ಧಿಸಿದೆ.

2025-26ರ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಮೌಲ್ಯ 47.89 ಲಕ್ಷ ಕೋಟಿ ರುಪಾಯಿಗೆ ಏರಿಕೆಯಾಗಿದೆ. 2024-25ರ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಇದು 44.42 ಲಕ್ಷ ಕೋಟಿ ರುಪಾಯಿ ಆಗಿತ್ತು. ಅಂದರೆ 7.8% ಬೆಳವಣಿಗೆ ದಾಖಲಿಸಿದೆ. ಈ ಅವಧಿಯಲ್ಲಿ ನಾಮಿನಲ್ ಜಿಡಿಪಿ ಅಥವಾ ಎಲ್ಲ ಸರಕು ಮತ್ತು ಸೇವೆಗಳ ಮಾರುಕಟ್ಟೆ ಅಧಾರಿತ ನಗದು ಮೌಲ್ಯ 86.05 ಲಕ್ಷ ಕೋಟಿ ರುಪಾಯಿಗಳಾಗಿದೆ. 2024-25ರ ಮೊದಲ ತ್ರೈಮಾಸಿಕದಲ್ಲಿ ಇದು 79.08 ಲಕ್ಷ ಕೋಟಿ ರುಪಾಯಿಗಳಾಗಿತ್ತು. ಅಂದರೆ 8.8% ಏರಿಕೆ ದಾಖಲಿಸಿದೆ.

ಕೃಷಿ ಕ್ಷೇತ್ರದ ಪ್ರಗತಿ:

ಕೃಷಿ ಕ್ಷೇತ್ರದಲ್ಲಿ ಕಳೆದ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ 3.7% ರ ಉತ್ತಮ ಪ್ರಗತಿ ದಾಖಲಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 1.5% ರ ಪ್ರಗತಿ ಉಂಟಾಗಿತ್ತು. ವಿದ್ಯುತ್ ಮತ್ತು ಉತ್ಪಾದನೆ ವಲಯದಲ್ಲಿ ವಾರ್ಷಿಕ ಸರಾಸರಿ ಲೆಕ್ಕದಲ್ಲಿ 7% ಬೆಳವಣಿಗೆ ಆಗಿದೆ. ಹೋಟೆಲ್, ಸಾರಿಗೆ, ಸಂವಹನ, ಸೇವೆಗಳ ವಲಯದಲ್ಲಿ 9.5% ರ ಪ್ರಗತಿ ಉಂಟಾಗಿದೆ. ಹಣಕಾಸು, ರಿಯಲ್ ಎಸ್ಟೇಟ್, ವೃತ್ತಿಪರ ಸೇವೆಗಳ ವಲಯದಲ್ಲಿ 9.5% ಬೆಳವಣಿಗೆ ಆಗಿದೆ. ಸಾರ್ವಜನಿಕ ಆಡಳಿತ ಮತ್ತು ರಕ್ಷಣಾ ವಲಯದಲ್ಲಿ 9.8% ಪ್ರಗತಿ ದಾಖಲಾಗಿದೆ.

ಸಾರ್ವಜನಿಕ ವೆಚ್ಚದ ಪುಷ್ಟಿ:

ಕೇಂದ್ರ ಸರಕಾರದ ಬಂಡವಾಳ ವೆಚ್ಚದಲ್ಲಿ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ 52% ಹೆಚ್ಚಳ ಆಗಿರುವುದು ಗಮನಾರ್ಹ. ಇದು ಜಿಡಿಪಿ ಬೆಳವಣಿಗೆಗೆ ಪುಷ್ಟಿ ನೀಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಬೇಡಿಕೆ ಕೂಡ ಈ ಅವಧಿಯಲ್ಲಿ ಪುಷ್ಟಿ ನೀಡಿತ್ತು. ಆದರೆ ಇದೀಗ ಟ್ರಂಪ್ ಅವರು ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ 50% ಸುಂಕ ಹೇರಿಕೆ ಮಾಡಿರುವುದರಿಂದ ಇದರ ಪ್ರಭಾವ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಜಿಡಿಪಿ ಅಂಕಿ ಅಂಶಗಳು ಅತ್ಯಂತ ಆರೋಗ್ಯಕರವಾಗಿವೆ. ಅಮೆರಿಕದ ಟಾರಿಫ್ ಸಂಘರ್ಷವನ್ನು ಎದುರಿಸಲು ಇದು ಸಹಕಾರಿಯಾಗಲಿದೆ” ಎಂದು ತಜ್ಞರು ಹೇಳಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8422 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment