ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ಕೈಗೊಂಡಿರುವ ವಿಶೇಷ ತನಿಖಾ ತಂಡ (ಎಸ್ ಐಟಿ) ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಕ್ಲೀನ್‌ಚಿಟ್ ಪಡೆದ ಆರೋಪಿಗಳನ್ನು ಮತ್ತೆ ವಿಚಾರಣೆ ನಡೆಸಲು ಮುಂದಾಗಿದೆ.
ಕರ್ನಾಟಕ ಪೊಲೀಸ್, ಸಿಬಿಐ ತನಿಖೆ ಬಳಿಕವೂ ಪ್ರಕರಣದಲ್ಲಿ ಕ್ಲೀನ್‌ಚಿಟ್ ಪಡೆದುಕೊಂಡಿದ್ದ ಉದಯ್ ಕುಮಾರ್ ಜೈನ್ ಸೇರಿದಂತೆ ಧೀರಜ್ ಕೆಲ್ಲಾ, ಮಲ್ಲಿಕ್ ಜೈನ್‌ಗೆ ಅವರನ್ನು ವಿಚಾರಣೆಗೆ ಕರೆದಿದ್ದು,ಅವರಲ್ಲಿ ಉದಯ್ ಕುಮಾರ್ ಜೈನ್ ಎಸ್‌ಐಟಿ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸಿದ್ದಾರೆ.
ಸೌಜನ್ಯ ತಾಯಿ ಎಸ್‌ಐಟಿಗೆ ಕೊಟ್ಟ ದೂರಿನ ಮೇರೆಗೆ ಅಥವಾ ಚಿನ್ನಯ್ಯ ನೀಡಿದ ಕೇಳಿಕೆಯ ಕಾರಣದಿಂದಲೂ ನನ್ನನ್ನ ಎಸ್‌ಐಟಿ ಕರೆದಿರಬಹುದು. ಯಾವುದೇ ತನಿಖೆಗೂ ನಾನು ಸಿದ್ಧನಿದ್ದೇನೆ ಎಂದು ಉದಯ್ ಕುಮಾರ್ ಜೈನ್ ವಿಚಾರಣೆಗೆ ಮುನ್ನ ತಿಳಿಸಿದ್ದಾರೆ.
ಪ್ರಕರಣದ ಸಂಬಂಧ ಒಂದು ವಿಡಿಯೋನಲ್ಲಿ ಸೌಜನ್ಯ ಕೊಲೆಯಾದ ಸಂದರ್ಭದಲ್ಲಿ ನಾನು ಇರಲಿಲ್ಲ ಎಂದು ಒಂದು ವಿಡಿಯೋನಲ್ಲಿ ಹೇಳಿದ್ದಾನೆ. ಮತ್ತೊಂದು ವಿಡಿಯೋನಲ್ಲಿ ನಾನೇ ಆಕೆಯನ್ನು ಹೊತ್ಕೊಂಡು ಹೋಗೋದು ನೋಡಿದ್ದೇನೆ ಎಂದು ಹೇಳಿದ್ದಾನೆ. ಸಿನಿಮೀಯ ರೀತಿಯಲ್ಲಿ ಕಥೆ ಕಟ್ಟಿದ್ದಾನೆ. ಈಗ ಸೌಜನ್ಯ ಪ್ರಕರಣದಲ್ಲಿ ನನ್ನ ಬಗ್ಗೆ ಆರೋಪ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಈಗಾಗಲೇ ಗುಂಡಿ ಎಲ್ಲಾ ತೋಡಿಯಾಗಿದೆ, ಈಗ ವಿಷಯಾಂತರ ಮಾಡಲು ಈ ರೀತಿ ಮಾಡುತ್ತಿದ್ದಾರೆ. ಬುರುಡೆ ಪ್ರಕರಣ ಮುಚ್ಚಿ ಹಾಕಲು ಈ ಪ್ರಕರಣವನ್ನ ಮತ್ತೆ ಮುನ್ನಲೆಗೆ ತರುತ್ತಿದ್ದಾರೆ. ಸಿಐಡಿ, ಸಿಬಿಐ ನನ್ನನೂ ತನಿಖೆ ನಡೆಸಿದ್ದಾರೆ. ಬ್ರೈನ್ ಮ್ಯಾಪಿಂಗ್ ಕೂಡ ಮಾಡಿದ್ದಾರೆ, ಇವತ್ತು ಮತ್ತೆ ಎಸ್‌ಐಟಿ ಕರೆದಿದ್ದಾರೆ. ನಾವು ಯಾವುದೇ ವಿಚಾರಣೆಗೂ ಸಿದ್ಧ ಎಂದು ಉದಯ್ ಕುಮಾರ್ ಜೈನ್ ಹೇಳಿದ್ದಾರೆ.
ಇಡಿ ದಾಳಿ ನಡೆಸಲಿ:
ಸೌಜನ್ಯ ಸತ್ತು ಒಂದು ವರ್ಷದ ನಂತರ ನಮ್ಮ ಹೆಸರು ಸೇರಿಸುವ ಕುತಂತ್ರ ನಡೆಯಿತು. ಆದ್ರೆ ಲೋಕಲ್ ಪೊಲೀಸ್ ತನಿಖೆ ವೇಳೆ ಎಫ್‌ಐಆರ್‌ನಲ್ಲಿ ನನ್ನ ಹೆಸರೇ ಇರಲಿಲ್ಲ. ಗೌರ್ಮೆಂಟ್ ವಕೀಲನನ್ನ ಕ್ಯಾಚ್ ಮಾಡಿ ಕುತಂತ್ರ ನಡೆಸಿದ್ರು. ನಮ್ಮನ್ನೆಲ್ಲಾ ದಿಕ್ಕಾಪಾಲು ಮಾಡಿ ಸೌಜ್ಯ ತಾಯಿ ದೊಡ್ಡ ಮನೆಯಲ್ಲಿ ಆರಾಮಾಗಿದ್ದಾರೆ. ಅವರ ಮನೆ ಮೇಲೂ ಇಡಿ ದಾಳಿಯಾಗಬೇಕು ಎಂದು ಒತ್ತಾಯಿಸಿದ್ದಾರೆ.



