ಬಿಹಾರದ ಔರಂಗಬಾದ್ ಆಸ್ಪತ್ರೆಯಲ್ಲಿ 2 ಗಂಟೆಗಳ ಅವಧಿಯಲ್ಲಿ ಬಿಸಿಗಾಳಿ ಪರಿಣಾಮದಿಂದ 16 ಮಂದಿ ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ.
ಬಿಹಾರದಲ್ಲಿ ಗುರುವಾರ ಬಿಸಿಗಾಳಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, 48.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಇಷ್ಟು ಗರಿಷ್ಠ ಪ್ರಮಾಣದಲ್ಲಿ ಉಷ್ಣಾಂಶ ದಾಖಲಾಗಿದೆ.
ಬಿಸಿಗಾಳಿಗೆ ಸಂಬಂಧಿಸಿದ ಒಂದೇ ದಿನದಲ್ಲಿ 35 ಪ್ರಕರಣಗಳು ದಾಖಲಾಗಿವೆ. ಆದರೆ ನಾವು ಸಾಧ್ಯವಾದಷ್ಟು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಬಿಸಿಗಾಳಿಗೆ ಸಂಬಂಧಸಿದ ಸಮಸ್ಯೆಗಳಿಂದ 16 ಮಂದಿ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ಸಾಕಷ್ಟು ಸಂಖ್ಯೆಯ ವೈದ್ಯರು ಇದ್ದಾರೆ. ಐಸ್ ಪ್ಯಾಕ್ ಗಳನ್ನು ಸಾಕಷ್ಟು ಪ್ರಮಾಣದಲ್ಲಿ ತರಿಸಲಾಗಿದೆ. ಅಲ್ಲದೇ ಹವಾ ನಿಯಂತ್ರಿತ ವಸ್ತುಗಳನ್ನು ತರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರು.