ನೇಪಾಳದ ಪ್ರಧಾನಿ ಕೆಪಿ ಶರ್ಮ ಓಲಿ ರಾಜೀನಾಮೆ ನಂತರವೂ ಪ್ರಧಾನಿ ಹಾಗೂ ರಾಷ್ಟ್ರಪತಿಗಳ ನಿವಾಸಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿ ಹಾನಿಗೊಳಿಸಿದ್ದಾರೆ. ಈ ಮೂಲಕ ನೇಪಾಳದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ.
ರಾಜಧಾನಿ ಕಠ್ಮಂಡುವಿನಲ್ಲಿ ಜೆನ್-2 ಪ್ರತಿಭಟನಾಕಾರರು ರಾಷ್ಟ್ರಪತಿ ರಾಮಚಂದ್ರ ಪೌಡೆಲ್ ಮತ್ತು ಪ್ರಧಾನಿ ಪಿಕೆ ಓಲಿ ನಿವಾಸಕ್ಕೆ ಬೆಂಕಿ ಹಚ್ಚಿ ಹಾನಿ ಮಾಡಿದ್ದಾರೆ. ಅಲ್ಲದೇ ಸಂಸತ್ ಭವನಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಾರೆ.
ನೇಪಾಳದಲ್ಲಿ ನಡೆದ ಪ್ರತಿಭಟನೆ ಹಿಂಸಾರೂಪ ಪಡೆದಿದ್ದು, ಕನಿಷ್ಠ 20 ಮಂದಿ ಮೃತಪಟ್ಟು ಸಾವಿರಾರು ಮಂದಿ ಗಾಯಗೊಂಡಿದ್ದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ 26 ಸಾಮಾಜಿಕ ಜಾಲತಾಣಗಳ ಮೇಲೆ ವಿಧಿಸಿದ್ದ ನಿಷೇಧ ತೆರವುಗೊಳಿಸಲಾಗಿತ್ತು.
ನಿಷೇಧ ವಾಪಸ್ ಪಡೆದ ನಂತರವೂ ಜೆನ್-2 ಸಂಘಟನೆಯ ಪ್ರತಿಭಟನಾಕಾರರ ಆಕ್ರೋಶ ತಣ್ಣಗಾಗುವ ಬದಲು ವಿಕೋಪಕ್ಕೆ ತಿರುಗಿದ್ದು, ಮಾಜಿ ಪ್ರಧಾನಿ ಪುಷ್ಪ ಕಮಲ್ ದಾಹಲ್ ಅಲಿಯಾಸ್ ದೀಪಕ್ ಖಾಡ್ಕಾ ಅವರ ನಿವಾಸಿಗಳನ್ನು ಪ್ರತಿಭಟನಾಕಾರರು ಧ್ವಂಸಗೊಳಿಸಿದ್ದಾರೆ.
ಮತ್ತೊಬ್ಬ ಮಾಜಿ ಪ್ರಧಾನಿ ಶೇರ್ ಬಹದ್ದೂರ್ ಡ್ಯುಬಾ ಅವರ ಮೇಲೆ ದುಷ್ಕರ್ಮಿಗಳ ಮೇಲೆ ಹಲ್ಲೆ ನಡೆಸಿದ್ದು, ಮನೆಯನ್ನು ಧ್ವಂಸಗೊಳಿಸಿದ್ದಾರೆ. ಪ್ರತಿಭಟನಾಕಾರರಿಂದ ತಪ್ಪಿಸಿಕೊಳ್ಳಲು ಆಗದೇ ಕುಸಿದುಬಿದ್ದಾಗ ಸೇನೆ ಅವರನ್ನು ರಕ್ಷಿಸಿ ಸಂಭಾವ್ಯ ಅಪಾಯದಿಂದ ಪಾರು ಮಾಡಿದ್ದಾರೆ.
ದೇಶದ್ಯಾಂತ ಹೇರಲಾಗಿರುವ ನಿಷೇದಾಜ್ಞೆಯನ್ನು ಉಲ್ಲಂಘಿಸಿರುವ ಹಲವು ಸಂಘಟನೆಗಳು ಹಿಂಸಾಚಾರದಲ್ಲಿ ತೊಡಗಿವೆ. ಹಣಕಾಸು ಸಚಿವ ಬಿಷ್ಣು ಪ್ರಸಾದ್ ಪೌಡೆಲ್ ಅವರನ್ನು ಬೆನ್ನಟ್ಟಿದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.
65 ವರ್ಷದ ಬಿಷ್ಣು ಪ್ರಸಾದ್ ಅವರನ್ನು ಒಬ್ಬ ಬೆನ್ನಟ್ಟಿದರೆ ಎದುರಿನಿಂದ ಬಂದ ಮತ್ತೊಬ್ಬ ಅವರ ಮೇಲೆ ಹಾರಿ ಬಿದ್ದಿದ್ದಾನೆ. ಇದರಿಂದ ನಿಯಂತ್ರಣ ತಪ್ಪಿ ಬಿದ್ದ ಅವರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿ ಗೋಡೆಗೆ ಡಿಕ್ಕಿ ಹೊಡೆಸಿದ್ದಾರೆ. ಇವರಿಂದ ತಪ್ಪಿಸಿಕೊಂಡು ಸಚಿವ ಓಡಿ ಹೋಗುತ್ತಿರುವ ವೀಡಿಯೋ ವೈರಲ್ ಆಗಿದೆ.


