Wednesday, 11 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ಅಪರಾಧ

Haveri ಪ್ರಿಯಕರನ ಜೊತೆ ಸೇರಿ 4 ವರ್ಷದ ಮಗಳನ್ನೇ ಕೊಂದ ಹೆತ್ತತಾಯಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 23 ವೀಕ್ಷಣೆಗಳು
havery news

ಹಾವೇರಿ: ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ ಪ್ರಿಯಕರನ ಜೊತೆಗೂಡಿ 4 ವರ್ಷದ ಮಗಳನ್ನೇ ಹೆತ್ತತಾಯಿ ಕೊಂದ ಅಮಾನುಷ ಘಟನೆ ದಾವಣಗೆರೆ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ನಡೆದಿದೆ.

ರಾಣೆಬೆನ್ನೂರು ತಾಲೂಕಿನ ಗುಡ್ಡದ ಅನ್ವೇರಿ ಗ್ರಾಮದಲ್ಲಿ ನಾಲ್ಕು ವರ್ಷದ ಮಗಳು ಪ್ರಿಯಾಂಕಾಳನ್ನು ತಾಯಿ ಗಂಗಮ್ಮ ಹಾಗೂ ಪ್ರಿಯಕರ ಅಣ್ಣಪ್ಪ ಮಡಿವಾಳ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.

ಆಗಸ್ಟ್​​ 2ರಂದು ಮಗುವನ್ನು ಕೊಲೆ ಮಾಡಿದ ಆರೋಪಿಗಳು ನಂತರ ಯಾರಿಗೂ ಗೊತ್ತಾಗದಂತೆ ಸಮೀಪದ ತುಂಗಾ ಮೇಲ್ದಂಡೆ ಕಾಲುವೆ ಬಳಿ ಮುಖ ಸುಟ್ಟು, ಬಳಿಕ ಪ್ರಿಯಾಂಕಾಳ ಶವವನ್ನು ಕಾಲುವೆಗೆ ಎಸೆದಿದ್ದರು. ಬಳಿಕ ಮೃತದೇಹವು ಪತ್ತೆಯಾಗಿತ್ತು.

ಈ ಬಗ್ಗೆ ಅಪರಿಚಿತ ಶವ ಎಂದು ಪರಿಗಣಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅಂತ್ಯಕ್ರಿಯೆಯನ್ನೂ ನೆರವೇರಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪತಿಯನ್ನು ತೊರೆದು ಪ್ರಿಯಕರನ ಜೊತೆಗಿದ್ದ ಮಹಿಳೆ: ಮಂಜುನಾಥ್ ಮತ್ತು ಗಂಗಮ್ಮ ದಂಪತಿಗೆ ಪ್ರಿಯಾಂಕಾ ಎಂಬ ಮಗಳಿದ್ದಳು.‌ ಈ ಮಧ್ಯ ಗಂಗಮ್ಮ ಅಣ್ಣಪ್ಪ ಎಂಬಾತನ ಜೊತೆ ಅಕ್ರಮ ಸಂಬಂಧ ಹೊಂದಿದ್ದು, ಆತನ ಜೊತೆ ವಾಸಿಸುತ್ತಿದ್ದಳು.

ಪ್ರಿಯಾಂಕಾಳನ್ನು ಸಹ ಗಂಗಮ್ಮ ಕರೆದೊಯ್ದಿದ್ದಳು. ಅಣ್ಣಪ್ಪ ಮತ್ತು ಗಂಗಮ್ಮ ಪ್ರಿಯಾಂಕಾಳನ್ನು ಕರೆದುಕೊಂದು ಗುಡ್ಡದ ಅನ್ವೇರಿ ಗ್ರಾಮ ತೊರೆದು ಬೇರೆ ಊರಿನಲ್ಲಿ ವಾಸಿಸುತ್ತಿದ್ದಳು. ಬಳಿಕ ಮತ್ತೆ ಗುಡ್ಡದ ಅನ್ವೇರಿಗೆ ಮರಳಿದ್ದರು. ಈ ಮಧ್ಯ ಮಂಜುನಾಥ ಮಗಳನ್ನಾದರೂ ಕಳಿಸು ಎಂದು ಕೇಳುತ್ತಿದ್ದ. ಪತಿಯು ತನ್ನ ಮಗಳನ್ನು ಕೊಡುವಂತೆ ಕೇಳಿಕೊಂಡು ಸೆಪ್ಟೆಂಬರ್​ 8ರಂದು ಆಕೆಯ ಬಳಿ ಕೇಳಿಕೊಂಡು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಪತಿ ಮಂಜುನಾಥ್​ ದೂರು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂದು ಅಣ್ಣಪ್ಪ ಮತ್ತು ಗಂಗಮ್ಮ ಗುಡ್ಡದ ಆನ್ವೇರಿ ಗ್ರಾಮದ ಮನೆಯಲ್ಲಿ ಪ್ರಿಯಾಂಕಾಳ ಕತ್ತು ಹಿಸುಕಿ ಉಸಿರುಗಟ್ಟಿಸಿ, ಕೊಂದು ಕಾಲುವೆಗೆ ಎಸೆದಿದ್ದರು. ಈ ಬಗ್ಗೆ ಪತಿ ನೀಡಿದ ದೂರಿನ ಮೇರೆ ಪ್ರಕರಣ ದಾಖಲಿಸಿಕೊಂಡಿರುವ ಆರೋಪಿಗಳನ್ನು ಬಂಧಿಸಿ, ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment