Friday, June 26, 2026
Google search engine
Homeಕಾನೂನುಪ್ರತಾಪ್ ಸಿಂಹ ಅರ್ಜಿ ವಜಾ: ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಗೆ ಹೈಕೋರ್ಟ್ ಗ್ರೀನ್...

ಪ್ರತಾಪ್ ಸಿಂಹ ಅರ್ಜಿ ವಜಾ: ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಮಾಡಲು ಬುಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ಅವರಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟಕರಾಗಿ ನೇಮಕ ಮಾಡಿರುವ ರಾಜ್ಯ ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿಎಂ ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ, ದಸರಾ ಉದ್ಘಾಟನೆ ವಿಚಾರದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡುಬಂದಿಲ್ಲ. ಹೀಗಾಗಿ ಅರ್ಜಿಯನ್ನು ತಿರಸ್ಕರಿಸಲಾಗಿದೆ ಸೋಮವಾರ ನೀಡಿದ ತೀರ್ಪಿನಲ್ಲಿ ಸ್ಪಷ್ಟವಾಗಿ ತಿಳಿಸಿದೆ.

ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ , ಗಿರೀಶ್ ಕುಮಾರ್ ಮತ್ತು ಗೌರವ್‌ ಬಾನು ಮುಷ್ತಾಕ್ ಅವರನ್ನು ಮೈಸೂರು ದಸರಾ ಉದ್ಘಾಟಕರಾಗಿ ನೇಮಕ ಮಾಡಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.

ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು, ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆ ಮಾಡುವ ಸಂಪ್ರದಾಯವಿದೆ. ರಾಜ್ಯ ಸರ್ಕಾರ ಬಾನು ಮುಷ್ತಾಕ್ ಅವರ ಆಯ್ಕೆ ಮಾಡುವ ಮೂಲಕ ಹಿಂದೂಗಳ ಭಾವನೆಗೆ ಘಾಸಿ ಮಾಡಿದೆ. ಹೀಗಾಗಿ ಬಾನು ಮುಷ್ತಾಕ್‌ ಅವರಿಗೆ ನೀಡಿರುವ ಆಹ್ವಾನ ಹಿಂಪಡೆಯಲು ನಿರ್ದೇಶನ ನೀಡಬೇಕು ಅನ್ನುವುದು ಅರ್ಜಿದಾರರ ಮನವಿಯಾಗಿತ್ತು.

ಹಿಂದೂ ಆಗಮಿಕ ಪದ್ಧತಿಯಂತೆ ದಸರಾ ಉದ್ಘಾಟನೆ ನಡೆಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಕೆಯಾಗಿತ್ತು. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರ ಆಯ್ಕೆ ಯೋಗ್ಯವಾದುದು ಎಂದು ಪ್ರಶಂಸೆಗಳ ಜೊತೆಗೆ ಅವರ ಆಯ್ಕೆ ಸರಿಯಲ್ಲ, ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎಂಬ ವಾದವೂ ತೀವ್ರಗೊಂಡಿದೆ. ಈಗ ಹೈಕೋರ್ಟ್‌ ಕೂಡ ಬಾನು ಅವರ ಆಯ್ಕೆ ಬಗೆಗಿನ ವಿವಾದಕ್ಕೆ ಅಂತ್ಯ ಹಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments