ಕನ್ನಡದ ಸ್ಟಾರ್ ದಂಪತಿಗಳಾದ ಉಪೇಂದ್ರ ಮತ್ತು ಪ್ರಿಯಾಂಕಾ ಅವರ ಮೊಬೈಲ್ ಫೋನ್ ಅನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ.
ಮೊಬೈಲ್ ಫೋನ್ ಹ್ಯಾಕ್ ಮಾಡಿರುವ ದುಷ್ಕರ್ಮಿಗಳು ವಾಟ್ಸಪ್ ಮೂಲಕ ಪರಿಚರಿಗೆ ಮೆಸೇಜ್ ಮಾಡಿ ಹಣ ಕೇಳುತ್ತಿದ್ದಾರೆ. ಇದನ್ನು ಅರಿತ ಉಪೇಂದ್ರ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ತನ್ನ ಮೊಬೈಲ್ ಫೋನ್ ಹ್ಯಾಕ್ ಹಾಕಿದ್ದು ಹಣ ಕೇಳಿದರೆ ಯಾರೂ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.
ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕ ಬೆಂಗಳೂರಿನ ಸೈಬರ್ ಕ್ರೈಮ್ ಗೆ ದೂರು ನೀಡಲು ಮುಂದಾಗಿದ್ದಾರೆ.
ಮೊಬೈಲ್ ಹ್ಯಾಕ್ ಆದ ಬಗ್ಗೆ ಉಪೇಂದ್ರ ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ಸಿನಿಮಾಗಳಲ್ಲಿ ಮೊಬೈಲ್ಗಳನ್ನು ಹ್ಯಾಕ್ ಮಾಡುವಂತೆ ಇಲ್ಲಿಯೂ ಆಗಿದೆ. ‘ಪ್ರಿಯಾಂಕಾಗೆ ಬೆಳಿಗ್ಗೆ ಒಂದು ಮೆಸೇಜ್ ಬಂತು. ಪ್ರಿಯಾಂಕಾ ಆರ್ಡರ್ ಮಾಡಿದ ಪಾರ್ಸಲ್ ಒಂದು ಬರೋದಿತ್ತು. ಪಾರ್ಸಲ್ ಸಂಬಂಧದ್ದೇ ಮೆಸೇಜ್ ಇದು ಎಂದು ಅವಳು ಭಾವಿಸಿದಳು. ಹ್ಯಾಶ್ ಟ್ಯಾಗ್ ಒತ್ತಿ ಆ ನಂಬರ್ ಡಯಲ್ ಮಾಡಿ, ಈ ನಂಬರ್ ಡಯಲ್ ಮಾಡಿ ಎಂದು ಮೆಸೇಜ್ ಮಾಡಿದಾತ ಹೇಳಿದ್ದಾನೆ. ಅವಳು ಹಾಗೆ ಮಾಡಿದಳು. ಅಲ್ಲಿ ಆಗುತ್ತಿಲ್ಲ ಎಂದು ನನ್ನ ಮೊಬೈಲ್ನಿಂದಲೂ ಪ್ರಯತ್ನಿಸಿದ್ದಾಳೆ. ಹೀಗಾಗಿ, ನನ್ನ ಮೊಬೈಲ್ ಕೂಡ ಹ್ಯಾಕ್ ಆಗಿದೆ ಎನಿಸುತ್ತಿದೆ’ ಎಂದು ಉಪೇಂದ್ರ ಹೇಳಿದ್ದಾರೆ.
‘ನನ್ನ ಮೊಬೈಲ್ನಿಂದ ಅಥವಾ ಪ್ರಿಯಾಂಕಾ ಮೊಬೈಲ್ನಿಂದ ಹಣ ಕೊಡಿ ಎಂದು ಮೆಸೇಜ್ ಬಂದರೆ ಇಗ್ನೋರ್ ಮಾಡಿ’ ಎಂದು ಉಪೇಂದ್ರ ಕೇಳಿಕೊಂಡಿದ್ದಾರೆ. ಈಗಾಗಲೇ ಪ್ರಿಯಾಂಕಾ ವಾಟ್ಸಾಪ್ನಿಂದ ಕೆಲವರಿಗೆ ಮೆಸೇಜ್ ಹೋಗಿದೆ. ‘ನನ್ನ ಮೊಬೈಲ್ ಯುಪಿಐ ವರ್ಕ್ ಆಗುತ್ತಿಲ್ಲ. ನೀವು ಹಣ ಕಳುಹಿಸಿ. 2 ಗಂಟೆಯಲ್ಲಿ ಕಳುಹಿಸುತ್ತೇವೆ’ ಎಂದು ಹ್ಯಾಕರ್ ಪ್ರಿಯಾಂಕಾ ಕಾಂಟ್ಯಾಕ್ಟ್ನಲ್ಲಿರೋ ವ್ಯಕ್ತಿಗಳಿಗೆ ಮೆಸೇಜ್ ಮಾಡುತ್ತಿದ್ದಾನೆ.



