ಗ್ರೇಟರ್ ಬೆಂಗಳೂರು ವಿರೋಧಿಸಿ ಬಿಜೆಪಿ ಕರೆ ನೀಡಿದ್ದ ಪ್ರತಿಭಟನೆ ವೇಳೆ ನಾಲ್ವರು ರೈತರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಘಟನೆ ರಾಮನಗರದಲ್ಲಿ ನಡೆದಿದೆ.
ರಾಮನಗರ ಜಿಲ್ಲೆಯ ಭೈರಮಂಗಲದಲ್ಲಿ ಭೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರೈತರು ಸೋಮವಾರ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮತ್ತು ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯತ್ತಿದ್ದಾಗ ಈ ಘಟನೆ ನಡೆದಿದೆ.
ಕುಮಾರ್, ಶ್ರೀಧರ್, ಶಾರದಾ ಮತ್ತು ಸೌಮ್ಯ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಈ ವೇಳೆ ಪಕ್ಕದಲ್ಲಿದ್ದ ಪ್ರತಿಭಟನಾ ನಿರತರು ತಡೆದು ಅನಾಹುತ ತಪ್ಪಿಸಿದ್ದಾರೆ.
ವಿಷ ಸೇವಿಸಿದ ರೈತರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವಿಷ ಸೇವಿಸಿದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.


