ಪರಮಾಣು ಬೆದರಿಕೆಗಳಿಗೆ ಬಗ್ಗುವುದಿಲ್ಲ ಎಂಬುದನ್ನು ನವ ಭಾರತ ಇತ್ತೀಚೆಗೆ ನಡೆದ ಆಪರೇಷನ್ ಸಿಂಧೂರ್ ನಲ್ಲಿ ತೋರಿಸಿಕೊಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
75ನೇ ಹುಟ್ಟುಹಬ್ಬದ ಅಂಗವಾಗಿ ಮಧ್ಯಪ್ರದೇಶದ ಧಾರ್ ನಲ್ಲಿ ನಡೆದ ಹಲವು ಯೋಜನೆಗಳಿಗೆ ಚಾಲನೆ ನೀಡಿದ ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಇದು ನವ ಭಾರತದ ಕಾಲ, ನಾವು ಯಾರಿಗೂ ಹೆದರುವುದಿಲ್ಲ. ಪರಮಾಣು ಬೆದರಿಕೆಗಳಿಗೆ ಬಗ್ಗುವುದಿಲ್ಲ. ಎದುರಾಳಿ ಮನೆಗೆ ನುಗ್ಗಿ ಶತ್ರುಗಳನ್ನು ಬೇಟೆಯಾಡುವ ಶಕ್ತಿ ಹೊಂದಿದೆ ಎಂದು ಅವರು ಹೇಳಿದರು.



