Monday, June 15, 2026
Google search engine
Homeರಾಜ್ಯಧರ್ಮಸ್ಥಳದಿಂದ ಮಹೇಶ್‌ ತಿಮರೋಡಿ ಒಂದು ವರ್ಷ ಗಡೀಪಾರು!

ಧರ್ಮಸ್ಥಳದಿಂದ ಮಹೇಶ್‌ ತಿಮರೋಡಿ ಒಂದು ವರ್ಷ ಗಡೀಪಾರು!

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ ಹಾಗೂ ಸೌಜನ್ಯ ಕೇಸಿನ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷ ಅವಧಿಗೆ ಗಡಿಪಾರು ಮಾಡಲಾಗಿದೆ.

ಮಹೇಶ್‌ ತಿಮರೋಡಿ ವಿರುದ್ಧ 32 ವಿವಿಧ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಅವರನ್ನು ಗಡಿಪಾರು ಮಾಡಬೇಕು ಎಂಬ ಒತ್ತಡದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಬೆಳ್ತಂಗಡಿ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಸಪ್ಟೆಂಬರ್ 20ರಂದೇ ಪುತ್ತೂರು ಸಹಾಯಕ ಆಯುಕ್ತರು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಆದ್ರೆ, ಇನ್ನೂ ಕೂಡ ಗಡಿಪಾರು ಪ್ರಕ್ರಿಯೆ ನಡೆದಿಲ್ಲ. ಯಾಕಂದ್ರೆ ಗಡಿಪಾರು ನೋಟಿಸ್ ಅನ್ನು ಪೊಲೀಸರು ಖುದ್ದು ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನೀಡಬೇಕು. ಅದಾದ ಬಳಿಕ ಗಡಿಪಾರು ಪ್ರಕ್ರಿಯೆ ನಡೆಯುತ್ತದೆ.

ಹಲವು ಪ್ರಕರಣಗಳಲ್ಲಿ ವಿಚಾರಣೆಯನ್ನು ಎದುರಿಸುತ್ತಿರುವ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಮಹೇಶ್ ಶೆಟ್ಟಿ ತಿಮರೋಡಿ ಅವರು ಹಲವು ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದಾರೆ. ಸೌಜನ್ಯ ಪರ ಹೋರಾಟದಲ್ಲೂ ಸಹ ಇವರು ಮುಂಚೂಣಿಯಲ್ಲಿದ್ದರು.

ಧರ್ಮಸ್ಥಳ ಪ್ರಕರಣದಲ್ಲೂ ಸಹ ಕಾಣಿಸಿಕೊಂಡಿದ್ದು, ಈ ಸಂಬಂಧ ಇವರ ಮನೆ ಮೇಲೆ ಎಸ್​ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದು, ಈ ಸಂಬಂಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧವೂ ಸಹ ಅವಹೇಳನಕಾರಿ ಹೇಳಿಕೆ ನೀಡಿ ಬಂಧನಕ್ಕೊಳಗಾಗಿದ್ದರು. ಸದ್ಯ ಇವರ ವಿರುದ್ಧ ಸುಮಾರು 32 ಪ್ರಕರಣ ಇದ್ದು, ವಿಚಾರಣೆ ಹಂತದಲ್ಲಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments