ಪಕ್ಕದ ಕೋಣೆಯಲ್ಲಿ ಹೆತ್ತವರು ಇದ್ದಾಗಲೇ 21ನೇ ಮಹಡಿಯಿಂದ ಹಾರಿ ತರಬೇತಿಯಲ್ಲಿದ್ದ ಯುವ ವೈದ್ಯ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.
ಮಥುರಾ ನಿವಾಸಿ ೨೯ ವರ್ಷದ ಶಿವ ಗೌರ್ ನಗರ-2ರಲ್ಲಿದ್ದ ಸೋದರಿ ಮನೆಗೆ ಆಗಮಿಸಿದ್ದ. ಈ ವೇಳೆ ಕುಟುಂಬದವರೆಲ್ಲರೂ ಮನೆಯಲ್ಲಿದ್ದಾಗಲೇ ಸೋಮವಾರ ಮಧ್ಯಾಹ್ನ ಮಹಡಿ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮನೆಯಲ್ಲಿ ಎಲ್ಲರೂ ಇದ್ದಾಗಲೇ ಮಹಡಿ ಏರಿ 21ನೇ ಮಹಡಿಗೆ ಹೋಗಿ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೂಡಲೇ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಶಿವ 2015ರ ದೆಹಲಿಯ ಖಾಸಗಿ ಎಂಬಿಬಿಎಸ್ ಕಾಲೇಜಿನಲ್ಲಿ ಪದವಿ ಪಡೆದಿದ್ದರು. 2020ರ ವೇಳೆಗೆ ಕೋವಿಡ್ ನಂತರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.


