ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕಕ್ಕೂ 2,200 ಕೋಟಿ ರೂ. ಪ್ರವಾಹ ಪರಿಹಾರ ಮೊತ್ತ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಪ್ರವಾಹ ಪೀಡಿತ ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜತೆ ನಡೆಸಿದ ಸಭೆಯಲ್ಲಿ ಮಹಾರಾಷ್ಟ್ರ ಸರ್ಕಾರ ಪ್ರವಾಹಕ್ಕೆ 2200 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಮಹಾರಾಷ್ಟ್ರಕ್ಕೆ ಕೊಡುವ ಮಾದರಿಯಲ್ಲೇ ರಾಜ್ಯಕ್ಕೂ ಪರಿಹಾರ ಹಣವನ್ನು ಬಿಡುಗಡೆಗೊಳಿಸುವಂತೆ ಕೇಂದ್ರ ಕ್ಕೆ ಒತ್ತಾಯಿಸಲು ತೀರ್ಮಾನಿಸಿತು.
ರಾಜ್ಯದಲ್ಲಿ ಪ್ರವಾಹದಿಂದ 10 ಲಕ್ಷ ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದೆ. ಇದುವರೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ತಜ್ಞರು ಜಂಟಿಯಾಗಿ 5 ಲಕ್ಷ ಹೆಕ್ಟೇರ್ ಪ್ರದೇಶವನ್ನು ಮಾತ್ರ ಸಮೀಕ್ಷೆ ನಡೆಸಿದೆ. ಉಳಿದ ಪ್ರದೇಶವನ್ನೂ ಜಂಟಿ ಸಮೀಕ್ಷೆ ಮಾಡಿ ಪರಿಹಾರ ಮೊತ್ತಕ್ಕೆ ಬೇಡಿಕೆ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಜಂಟಿ ಸಮೀಕ್ಷೆ ಅತ್ಯಂತ ಸಮರ್ಪಕ ಮತ್ತು ವೈಜ್ಞಾನಿಕವಾಗಿರುವಂತೆ ಎಚ್ಚರ ವಹಿಸಿಸಬೇಕು. ಅಂದಾಜು ಕಂದಾಯ ಇಲಾಖೆಯಿಂದ ಸಾವಿರ ಕೋಟಿಯಷ್ಟು ಪರಿಹಾರ ಕೊಡಬೇಕಾಗಬಹುದು ಎನ್ನುವ ಅಂದಾಜಿನಲ್ಲಿ ನಾವು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಹವಾಮಾನ ಬದಲಾವಣೆಯ ತೀವ್ರ ಪರಿಣಾಮವನ್ನು ರಾಜ್ಯ ಎದುರಿಸುತ್ತಿದೆ. ಒಟ್ಟು ಎಂಟು ಜಿಲ್ಲೆಗಳಲ್ಲಿ ಇದರ ಪರಿಣಾಮ ಮತ್ತು ಅನಾಹುತಗಳು ಆಗಿವೆ ಎಂದು ಅವರು ಹೇಳಿದರು.
SDRF ಪ್ರಕಾರ ಪರಿಹಾರದ ಜೊತೆಗೆ ಪರಿಹಾರದ ಪ್ಯಾಕೇಜ್ ಘೋಷಿಸಬೇಕು ಎನ್ನುವ ಬೇಡಿಕೆ ಇದೆ. ಹೆಕ್ಟೇರ್ ಗೆ 8500ರೂ, ತರಿ ನೀರಾವರಿ ಜಮೀನಿಗೆ 17 ಸಾವಿರ ಇದೆ. ಕೆರೆ ಕ್ರಾಪ್ ಗೆ 22 ಸಾವಿರದ 500 ರೂಪಾಯಿ ಸಮೀಕ್ಷೆ ಮುಗಿದ ತಕ್ಷಣ ಈ ಮಾನದಂಡದಲ್ಲಿ ಪರಿಹಾರ ಬಿಡುಗಡೆಗೆ ಕಂದಾಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದರು.


