Wednesday, December 24, 2025
Google search engine
Homeದೇಶಕೇಂದ್ರದಿಂದ ತೆರಿಗೆ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ: ಯುಪಿ, ಬಿಹಾರಕ್ಕೆ ಬಂಪರ್!

ಕೇಂದ್ರದಿಂದ ತೆರಿಗೆ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ: ಯುಪಿ, ಬಿಹಾರಕ್ಕೆ ಬಂಪರ್!

ಕೇಂದ್ರ ಸರ್ಕಾರ ದಸರಾ ಹಾಗೂ ದೀಪಾವಳಿ ವೇಳೆ ಕರ್ನಾಟಕ ಸೇರಿದಂತೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ ತೆರಿಗೆ ಪಾಲನ್ನು ಬಿಡುಗಡೆ ಮಾಡಿದೆ. ಉತ್ತರ ಪ್ರದೇಶ ಮತ್ತು ಬಿಹಾರಗಳಿಗೆ ಬಂಪರ್ ಪಾಲು ಬಿಡುಗಡೆ ಆಗಿದ್ದು, ಕರ್ನಾಟಕಕ್ಕೆ ಮತ್ತೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಮಾಡಲಾಗಿದೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗುರುವಾರ ಎಕ್ಸ್ ನಲ್ಲಿ ಈ ವಿಷಯ ಘೋಷಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ಕರ್ನಾಟಕ ಸೇರಿದಂತೆ ಎಲ್ಲಾ 28 ರಾಜ್ಯ ಸರ್ಕಾರಗಳಿಗೂ ಕೇಂದ್ರ ಹಣಕಾಸು ಸಚಿವಾಲಯ ಒಟ್ಟಾರೆ 1,01,603 ಕೋಟಿ ರೂ. ಹೆಚ್ಚುವರಿ ತೆರಿಗೆ ಹಂಚಿಕೆ ಹಣವನ್ನು ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.

tax

ದಸರಾ-ದೀಪಾವಳಿ ಹಬ್ಬಗಳ ಋತುವಿನಲ್ಲಿ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ನೆರವಾಗುವಂತೆ ತೆರಿಗೆ ಹಂಚಿಕೆಯ ಮುಂಗಡ ಒಂದು ಕಂತು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕಕ್ಕೆ 3705 ಕೋಟಿ ರೂ. ಹೆಚ್ಚುವರಿ ತೆರಿಗೆ ಪಾಲನ್ನು ಒದಗಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಜ್ಯಗಳ ಬಂಡವಾಳ ವೆಚ್ಚವನ್ನು ವೇಗಗೊಳಿಸಲು ಹಾಗೂ ಅಭಿವೃದ್ಧಿ, ಕಲ್ಯಾಣ ಕಾರ್ಯಗಳ ವೆಚ್ಚಕ್ಕೆ ಆರ್ಥಿಕ ನೆರವು ಒದಗಿಸುವ ದಿಸೆಯಲ್ಲಿ ಕೇಂದ್ರ ಸರ್ಕಾರ ದೇಶದ ಎಲ್ಲಾ 28 ರಾಜ್ಯ ಸರ್ಕಾರಗಳಿಗೂ ಬುಧವಾರ ರಾತ್ರಿ ಒಟ್ಟಾರೆ 1,01,603 ಕೋಟಿ ರೂ. ತೆರಿಗೆ ಹಂಚಿಕೆಯನ್ನು ಮುಂಗಡ ಕಂತಾಗಿ ಬಿಡುಗಡೆ ಮಾಡಲಾಗಿದೆ.

txa

ಅಕ್ಟೋಬರ್ 10ರಂದು ಬಿಡುಗಡೆ ಆಗಬೇಕಾದ ಸಾಮಾನ್ಯ ಮಾಸಿಕ ಹಂಚಿಕೆ ಜೊತೆಗೇ ಈ ಹೆಚ್ಚುವರಿ ತೆರಿಗೆ ಪಾಲಿನ ಹಣವೂ ಬಿಡುಗಡೆಯಾಗಲಿದೆ. ರಾಜ್ಯ ಸರ್ಕಾರಗಳು ಅಭಿವೃದ್ಧಿ ಕಾರ್ಯಗಳಿಗೆ ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಲಿ ಎಂದು ಜೋಷಿ ಸಲಹೆ ನೀಡಿದ್ದಾರೆ.

ಕರ್ನಾಟಕಕ್ಕೆ ಮತ್ತೆ ಅನ್ಯಾಯ

ಕೇಂದ್ರ ಸರ್ಕಾರ ತೆರಿಗೆ ಪಾಲು ಹಂಚಿಕೆಯಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತ ರಾಜ್ಯಗಳಿಗೆ ಮತ್ತೊಮ್ಮೆ ಅನ್ಯಾಯ ಮಾಡಲಾಗಿದೆ. ಉತ್ತರ ಪ್ರದೇಶ ಹಾಗೂ ಚುನಾವಣೆ ನಡೆಯಲಿರುವ ಬಿಹಾರಕ್ಕೆ ಬಂಪರ್ ಮೊತ್ತ ಬಿಡುಗಡೆ ಮಾಡಿದ್ದರೆ, ಕರ್ನಾಟಕವನ್ನು ಮತ್ತೆ ಕಡೆಗಣಿಸಲಾಗಿದೆ.

ತೆರಿಗೆ ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿರುವ ಕರ್ನಾಟಕಕ್ಕೆ ಸೂಕ್ತ ಪಾಲು ನೀಡದೇ ಕೇಂದ್ರ ಅನ್ಯಾಯ ಮಾಡಿದೆ. ತೆರಿಗೆ ಹಂಚಿಕೆಯಲ್ಲಿ 18,227 ಕೋಟಿ ರೂ. ಪಡೆದಿರುವ ಉತ್ತರ ಪ್ರದೇಶ ಅತೀ ಹೆಚ್ಚು ಪಾಲು ಪಡೆದಿದೆ. 10,219 ಕೋಟಿ ರೂ. ಪಾಲು ಪಡೆದ ಬಿಹಾರ ಎರಡನೇ ಸ್ಥಾನದಲ್ಲಿದೆ. ಈ ಎರಡೂ ರಾಜ್ಯಗಳಲ್ಲಿ ಸೂಕ್ತ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಬಂಡವಾಳ ಹೂಡಿಕೆಯಲ್ಲಿ ತೀರಾ ಹಿಂದುಳಿದಿದ್ದರೂ ಅತೀ ಹೆಚ್ಚು ಪಾಲು ಪಡೆದಿವೆ.

ಅತೀ ಚಿಕ್ಕ ರಾಜ್ಯವಾದ ಓಡಿಶಾಗೆ 4601 ಕೋಟಿ ರೂ.. ರಾಜಸ್ಥಾನಕ್ಕೆ 6123 ಕೋಟಿ ರೂ. ಮಧ್ಯಪ್ರದೇಶಕ್ಕೆ 7,976 ಕೋಟಿ ರೂ.., ಪಶ್ಚಿಮ ಬಂಗಾಳಕ್ಕೆ 7644 ಕೋಟಿ ರೂ.,  ತಮಿಳುನಾಡಿಗೆ 4144 ಕೋಟಿ, ಆಂಧ್ರಪ್ರದೇಶಕ್ಕೆ 4112 ಕೋಟಿ ರೂ.ನಂತೆ ಕರ್ನಾಟಕಕ್ಕಿಂತ ಅಧಿಕ ಪಾಲು ನೀಡಲಾಗಿದೆ.

ರೈತರಿಗೆ ಬೆಂಬಲ ಬೆಲೆ ತಲುಪಿಸಿ: ಕೇಂದ್ರ ಸಲಹೆ

ಅತಿವೃಷ್ಟಿಯಿಂದಾಗಿ ರಾಜ್ಯದ ರೈತರು ತತ್ತರಿಸಿದ್ದಾರೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯಾದ್ಯಾಂತ ವಿಪರೀತ ಮಳೆಯಿಂದ ರೈತರು ಬೆಳೆಹಾನಿಗೆ ಒಳಗಾಗಿದ್ದಾರೆ. ಈ ಸಂಕಷ್ಟ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ವಿವಿಧ ಬೆಳೆಗಳಿಗೆ ಬೆಂಬಲ ಬೆಲೆಯ ನೆರವು ಕಲ್ಪಿಸಿದೆ. ರಾಜ್ಯ ಸರ್ಕಾರ ಅನ್ನದಾತರಿಗೆ ಇದನ್ನು ಸಮರ್ಪಕವಾಗಿ ತಲುಪಿಸಲಿ ಎಂದು ಒತ್ತಾಯಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ವಿಶೇಷವಾಗಿ ಕರ್ನಾಕಟದ ರೈತರಿಗಾಗಿಯೇ ಬೆಂಬಲ ಬೆಲೆಯಲ್ಲಿ ಹೆಸರು, ಉದ್ದಿನಕಾಳು, ಸೋಯಾಬಿನ್‌, ಶೇಂಗಾ ಮತ್ತು ಸೋಯಾಬಿನ್‌ ಖರೀದಿಗೆ ಸೂಚಿಸಿದ್ದ ಕೇಂದ್ರ ಸರ್ಕಾರ, ಇದೀಗ ಹಿಂಗಾರು ಹಂಗಾಮಿನ ದ್ವಿದಳ ಧಾನ್ಯಗಳು ಸೇರಿದಂತೆ ವಿವಿಧ ಬೆಳೆಗಳ ಬೆಂಬಲ ಬೆಲೆಯನ್ನೂ ಹೆಚ್ಚಿಸಿ ರೈತರ ನೆರವಿಗೆ ಬಂದಿದೆ.

ಮುಂಬರುವ ಹಿಂಗಾರು ಹಂಗಾಮಿನ ಮಾರುಕಟ್ಟೆಯಲ್ಲಿ ಖರೀದಿಸುವ ಗೋಧಿ, ಕುಸುಬೆ, ಬಾರ್ಲಿ, ಮಸೂರ್‌, ಸಾಸಿವೆ, ಕಡಲೆ ಹೀಗೆ ವಿವಿಧ ಧಾನ್ಯಗಳಿಗೆ ಕೇಂದ್ರ ಸರ್ಕಾರ ಈ ಬಾರಿ ಅತಿ ಹೆಚ್ಚಿನ ಬೆಂಬಲ ಬೆಲೆಯನ್ನು ಘೋಷಿಸಿದೆ. ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ಇದರ ಲಾಭವನ್ನು ಸಮರ್ಪಕವಾಗಿ ಒದಗಿಸುವ ಕೆಲಸ ಮಾಡಲಿ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments