Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

3211 ದಿನದ ನಂತರ ತವರಿನಲ್ಲಿ ಶತಕ ಸಿಡಿಸಿದ ಕೆಎಲ್ ರಾಹುಲ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 24 ವೀಕ್ಷಣೆಗಳು
kl rahul

ಕನ್ನಡಿಗ ಕೆಎಲ್ ರಾಹುಲ್ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ದಾಖಲಿಸಿ ಭಾರತ ತಂಡಕ್ಕೆ ಮಹತ್ವದ ಮುನ್ನಡೆ ತಂದುಕೊಟ್ಟಿದ್ದಾರೆ.

ಅಹಮದಾಬಾದ್ ನಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಶುಕ್ರವಾರ 121 ರನ್ ಗೆ 2 ವಿಕೆಟ್ ಗೆ 121 ರನ್ ಗಳಿಂದ ಮೊದಲ ಇನಿಂಗ್ಸ್ ಮುಂದುವರಿಸಿದ ಭಾರತ ತಂಡ ಭೋಜನ ವಿರಾಮದ ವೇಳೆಗೆ 3 ವಿಕೆಟ್ ಕಳೆದುಕೊಂಡು 218 ರನ್ ಗಳಿಸಿದೆ.

ಭಾರತ ತಂಡ ಕೆಎಲ್ ರಾಹುಲ್ ಶತಕದ ಸಹಾಯದಿಂದ ಮೊದಲ ಇನಿಂಗ್ಸ್ ನಲ್ಲಿ ಮುನ್ನಡೆ ಪಡೆದಿದ್ದು ಭಾರೀ ಮುನ್ನಡೆಯತ್ತ ದಾಪುಗಾಲಿರಿಸಿದೆ.

197 ಎಸೆತಗಳನ್ನು ಎದುರಿಸಿದ ರಾಹುಲ್ 12 ಬೌಂಡರಿ ಸಹಾಯದಿಂದ ಶತಕ ಪೂರೈಸಿ ಜೊಮೆಲ್ ವಾರಿಯರ್ ಎಸೆತದಲ್ಲಿ ಔಟಾದರು. ಇದು ರಾಹುಲ್ ಪಾಲಿಗೆ 11ನೇ ಟೆಸ್ಟ್ ಶತಕವಾಗಿದೆ.

ರಾಹುಲ್ ತವರಿನಲ್ಲಿ 3211 ದಿನಗಳ ನಂತರ ದಾಖಲಿಸಿದ ಮೊದಲ ಶತಕ ಇದಾಗಿದೆ. ಚೆನ್ನೈನಲ್ಲಿ 2011ರಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕೊನೆಯ ಬಾರಿಗೆ ಶತಕ ಸಿಡಿಸಿದ್ದರು. ತವರಿನಲ್ಲಿ ಶತಕ ಸಿಡಿಸಲು ರಾಹುಲ್ ಸುದೀರ್ಘ 9 ವರ್ಷಗಳ ಕಾಲ ಕಾಯಬೇಕಾಯಿತು. ಈ ಮೂಲಕ ತವರಿನಲ್ಲಿ ಶತಕದ ಬರ ನೀಗಿಸಿಕೊಂಡಿದ್ದಾರೆ.

ರಾಹುಲ್ ತಮ್ತು ಶುಭಮನ್ ಗಿಲ್ 3ನೇ ವಿಕೆಟ್ ಗೆ 98 ರನ್ ಜೊತೆಯಾಟ ನಿಭಾಯಿಸಿದರು. ನಾಯಕ ಗಿಲ್ 100 ಎಸೆತಗಳಲ್ಲಿ 5 ಬೌಂಡರಿ ಒಳಗೊಂಡ ಬರೋಬ್ಬರಿ ಅರ್ಧಶತಕ (50) ಬಾರಿಸಿ ನಿರ್ಗಮಿಸಿದರು.

ವೆಸ್ಟ್ ಇಂಡೀಸ್ ಬೌಲಿಂಗ್ ದಾಳಿ ನೀರಸವಾಗಿದ್ದು, ನಾಯಕ ರೋಸ್ಟನ್ ಚೇಸ್ 2 ವಿಕೆಟ್ ಪಡೆದು ಗಮನ ಸೆಳೆದಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment