ಮಗಳನ್ನು ಮಚ್ಚಿನಿಂದ ಕೊಚ್ಚಿಕೊಂದ ತಾಯಿ ನಂತರ ಆಕೆಯ ಶವದ ಮೇಲೆಯೇ ನಿಂತು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ 38 ವರ್ಷದ ತಾಯಿ ಶ್ರುತಿ ಈ ಕೃತ್ಯ ಎಸಗಿದ್ದು, 6 ತರಗತಿ ಓದುತ್ತಿದ್ದ ಮಗಳು ಪೂರ್ವಿಕಾ ತಾಯಿಯ ಕ್ರೌರ್ಯಕ್ಕೆ ಬಲಿಯಾಗಿದ್ದಾಳೆ.
ಮಹಿಳೆ ಆತ್ಮಹತ್ಯೆಗೂ ಮುನ್ನ ಮಗಳಿಗೆ ಮಚ್ಚಿನಿಂದ ಹೊಡೆದು ಕೊಂದಿದ್ದಾಳೆ. ಬಳಿಕ ಆಕೆಯ ಮೃತದೇಹದ ಮೇಲೆ ನಿಂತುಕೊಂಡ ಪ್ಯಾನ್ಗೆ ನೇಣುಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶೃತಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಳು. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಳು ಎನ್ನಲಾಗಿದೆ.
ಮಹಿಳೆಯ ಪತಿ ರಾಮಣ್ಣ ಮೆಗ್ಗಾನ್ ಆಸ್ಪತ್ರೆಯಲ್ಲಿ ನೈಟ್ ಶಿಫ್ಟ್ ಡ್ಯೂಟಿಯಲ್ಲಿದ್ದರು. ಬೆಳಗ್ಗೆ ಕೆಲಸ ಮುಗಿಸಿ ಕ್ವಾಟ್ರಸ್ಗೆ ಬಂದಾಗ ವಿಷಯ ತಿಳಿದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ


