ಅಡುಗೆ ಮಾಡಲಿಲ್ಲ ಅಂತ ಹೆತ್ತ ತಾಯಿಯನ್ನೇ ದೊಣ್ಣೆಯಿಂದ ಹೊಡೆದು ಮಗ ಕೊಲೆ ಮಾಡಿದ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳುಚೆನ್ನಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಾಯಿ ಪ್ರೇಮಾ (45) ಅವರನ್ನು ಮಗ ಸಂತೋಷ (19) ಹತ್ಯೆಗೈದಿದ್ದಾನೆ.
ಗುರುವಾರ ರಾತ್ರಿ ಕಂಠಪೂರ್ತಿ ಕುಡಿದು ಮನೆಗೆ ಬಂದ ಮಗ ಅಡುಗೆ ಮಾಡಲು ತಾಯಿಗೆ ಹೇಳಿದ್ದಾನೆ. ಕುಡಿದು ತಡರಾತ್ರಿ ಬಂದಿದ್ದರಿಂದ ತಾಯಿ ಅಡುಗೆ ಮಾಡಲು ನಿರಾಕರಿಸಿದ್ದು, ಇದರಿಂದ ಸಿಟ್ಟಿಗೆದ್ದ ಮಗ ದೊಣ್ಣೆಯಿಂದ ತಲೆಗೆ ಬಲಾವಾಗಿ ಹೊಡೆದಿದ್ದಾನೆ.
ತೀವ್ರವಾಗಿ ಗಾಯಗೊಂಡಿದ್ದ ಪ್ರೇಮಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಿಗ್ಗೆ ಹಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮಗನನ್ನು ಬಂಧಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.



