Saturday, June 13, 2026
Google search engine
Homeಮನರಂಜನೆಕಾಂತಾರ ಚಾಪ್ಟರ್ -1 ನೋಡಲು ಇಡೀ ಚಿತ್ರಮಂದಿರ ಬುಕ್ ಮಾಡಿದ ಪ್ರತಾಪ್ ಸಿಂಹ!

ಕಾಂತಾರ ಚಾಪ್ಟರ್ -1 ನೋಡಲು ಇಡೀ ಚಿತ್ರಮಂದಿರ ಬುಕ್ ಮಾಡಿದ ಪ್ರತಾಪ್ ಸಿಂಹ!

ಭಾರೀ ನಿರೀಕ್ಷೆ ಮೂಡಿಸಿದ ರಿಷಭ್ ಶೆಟ್ಟಿ ನಟಿಸಿ ನಿರ್ದೇಶಿಸಿದ ಕಾಂತಾರ ಚಾಪ್ಟರ್-1 ಚಿತ್ರ ವೀಕ್ಷಿಸಲು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಇಡೀ ಚಿತ್ರಮಂದಿರವನ್ನೇ ಬುಕ್ಕಿಂಗ್ ಮಾಡಿ ಸದ್ದು ಮಾಡಿದ್ದಾರೆ.

ಅಕ್ಟೋಬರ್ 2ರಂದು ಜಗತ್ತಿನಾದ್ಯಂತ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಿರುವ ಕಾಂತರಾ ಚಾಪ್ಟರ್ -1 ಚಿತ್ರಕ್ಕೆ ಭರ್ಜರಿ ಪ್ರತಿಕ್ರಿಯೆ ಬಂದಿದ್ದು ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಆದರೆ ಪ್ರತಾಪ್ ಸಿಂಹ ಮೈಸೂರಿನಲ್ಲಿ ಚಿತ್ರ ವೀಕ್ಷಣೆಗೆ ಚಿತ್ರ ಮಂದಿರದಲ್ಲಿ ಒಂದು ದಿನದ ಶೋವನ್ನು ಸಂಪೂರ್ಣ ಬುಕ್ ಮಾಡಿದ್ದಾರೆ.

ಪ್ರತಾಪ್ ಸಿಂಹ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದು, ‘ನಾಳೆ (ಅಕ್ಟೋಬರ್ 4ರಂದು) 4 ಗಂಟೆಗೆ ಕಾರ್ಯಕರ್ತರೆಲ್ಲ ಒಡಗೂಡಿ ಕಾಂತಾರ 2 ನೋಡೋಣ. DRCಯಲ್ಲಿ ಫುಲ್ ಸ್ಕ್ರೀನ್ ಬುಕ್ ಮಾಡಿದ್ದೇನೆ’ ಎಂದು ಟ್ವೀಟ್ ಮಾಡಿದ್ದಾರೆ.

ಟಿಕೆಟ್ ಬುಕಿಂಗ್ ವಿವರವನ್ನು ಕೂಡ ಪ್ರತಾಪ್ ಸಿಂಹ ಹಂಚಿಕೊಂಡಿದ್ದಾರೆ. DRCಯಲ್ಲಿ 2ನೇ ಸ್ಕ್ರೀನ್​​ನಲ್ಲಿ ಒಟ್ಟು 197 ಟಿಕೆಟ್​​ಗಳನ್ನು ಬುಕ್ ಮಾಡಿದ್ದು, ಇದಕ್ಕಾಗಿ 68,920 ರೂಪಾಯಿ ಖರ್ಚು ಮಾಡಿದ್ದಾರೆ. ಇದರಲ್ಲಿ 450 ರೂ. ಮುಖಬೆಲೆಗೆ ಲಕ್ಸುರಿ ವಿಭಾಗದ 15 ಆಸನಗಳಿಗಾಗಿ 6,750 ರೂ., 350 ರೂ. ಮುಖಬೆಲೆಯ ಪ್ರೀಮಿಯರ್ ವಿಭಾಗದ 131 ಆಸನಗಳಿಗಾಗಿ 45,800 ರೂ. ಹಾಗೂ ಸ್ಟ್ಯಾಂಡರ್ಡ್ ವಿಭಾಗದ 51 ಆಸನಗಳಿಗಾಗಿ 16,320 ರೂ. ಸೇರಿದಂತೆ ಒಟ್ಟಾರೆ 69.920 ರೂ. ಖರ್ಚು ಮಾಡಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ಮೂಲಕ ‘ಕಾಂತಾರ: ಚಾಪ್ಟರ್ 1’ ನಿರ್ಮಿಸಿರುವ ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ಇದೇ ಸಂದರ್ಭದಲ್ಲಿ ಪ್ರತಾಪ್ ಸಿಂಹ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

‘ಕರ್ನಾಟಕದ ಹೆಮ್ಮೆಯ ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್‌ನ ಸ್ಥಾಪಕರಾದ ಶ್ರೀ ವಿಜಯ್ ಕಿರಗಂದೂರು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ತಾಯಿ ಚಾಮುಂಡೇಶ್ವರಿಯು ತಮಗೆ ಆರೋಗ್ಯ, ಆಯಸ್ಸು, ಸುಖ-ಶಾಂತಿ, ನೆಮ್ಮದಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಪ್ರತಾಪ್ ಸಿಂಹ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ರಿಷಬ್ ಶೆಟ್ಟಿ ‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ನಿರ್ದೇಶನ ಮಾಡಿ, ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ರಿಷಬ್ ಶೆಟ್ಟಿ ಜೊತೆ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ, ಜಯರಾಮ್, ಪ್ರಕಾಶ್ ತುಮಿನಾಡು ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. 7 ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments