ಭಾರತ ಕ್ರಿಕೆಟ್ ತಂಡದ ರನ್ ಮೆಷಿನ್ ವಿರಾಟ್ ಕೊಹ್ಲಿ 2023ನೇ ಸಾಲಿನಲ್ಲಿ ತೋರಿದ ಉತ್ತಮ ಪ್ರದರ್ಶನಕ್ಕಾಗಿ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಕೊಹ್ಲಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದ್ದರಿಂದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಗೆ ಸಿದ್ಧತೆ ನಡೆಸಿರುವ ಭಾರತ ತಂಡಕ್ಕೆ ಆತ್ಮವಿಶ್ವಾಸ ಹೆಚ್ಚಿಸಿದಂತಾಗಿದೆ. ಜೂನ್ 5ರಂದು ಐರ್ಲೆಂಡ್ ತಂಡವನ್ನು ಎದುರಿಸುವ ಮೂಲಕ ಭಾರತ ತಂಡ ವಿಶ್ವಕಪ್ ನಲ್ಲಿ ಅಭಿಯಾನ ಆರಂಭಿಸಲಿದೆ.
ವಿರಾಟ್ ಕೊಹ್ಲಿ ಶನಿವಾರ ಬೆಳಿಗ್ಗೆ ತಮ್ಮ ಇನ್ ಸ್ಟಾಗ್ರಾಂನಲ್ಲಿ ಐಸಿಸಿಯಿಂದ ಪಡೆದ ವರ್ಷದ ಏಕದಿನ ಪ್ರಶಸ್ತಿ ಟ್ರೋಫಿ ಹಾಗೂ ಕ್ಯಾಪ್ ಧರಿಸಿರುವ ಫೋಟೊ ಪೋಸ್ಟ್ ಮಾಡಿದ್ದಾರೆ.
35 ವರ್ಷದ ಕೊಹ್ಲಿ 2023ನೇ ಸಾಲಿನಲ್ಲಿ 27 ಏಕದಿನ ಪಂದ್ಯಗಳನ್ನು ಆಡಿದ್ದು, 6 ಶತಕ, 8 ಅರ್ಧಶಕತ ಸೇರಿದಂತೆ 72.47ರ ಸರಾಸರಿಯಲ್ಲಿ 99.13ರ ಬ್ಯಾಟಿಂಗ್ ಸರಾಸರಿಯಲ್ಲಿ 1377 ರನ್ ಗಳಿಸಿದ್ದಾರೆ. ಗರಿಷ್ಠ 166 ರನ್ ಗಳಿಸಿದ್ದಾರೆ.
ಏಕದಿನ ವಿಶ್ವಕಪ್ ನಲ್ಲಿ ಭಾರತ ತಂಡದ ಪರ ಅಮೋಘ ಪ್ರದರ್ಶನ ನೀಡಿದ್ದ ಪಾಕಿಸ್ತಾನ ವಿರುದ್ಧ 122 ರನ್ ಅಲ್ಲದೇ ತಂಡ ಸೂಪರ್ 4 ಹಂತ ತಲುಪಲು ಪ್ರಮುಖ ಕಾರಣರಾಗಿದ್ದರು.