Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಮೈಸೂರು ದಸರಾ ಗಜಪಡೆಗಳಿಗೆ ಬೀಳ್ಕೊಡುಗೆ, ಅಭಿಮಾನಿಗಳು ಭಾವುಕ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 54 ವೀಕ್ಷಣೆಗಳು
mysore dasara

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಯಶಸ್ವಿಯಾಗಿ ಜಂಬೂಸವಾರಿ ನಡೆಸಿದ ಅಭಿಮನ್ಯು ನೇತೃತ್ವದ ಗಜಪಡೆಗೆ ಇಂದು ಅರಮನೆ ಆವರಣದಲ್ಲಿ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಬೀಳ್ಕೊಡುಗೆ ನೀಡಲಾಯಿತು.

14 ಆನೆಗಳು ಮತ್ತು ಮಾವುತರು, ಕಾವಾಡಿಗರನ್ನು ಕೋಡಿ ಸೋಮೇಶ್ವರ ದೇವಾಲಯದ ಬಳಿ ಭಾನುವಾರ ಅರಣ್ಯ ಇಲಾಖೆ ಬೀಳ್ಕೊಟ್ಟಿತು. ಆನೆಗಳನ್ನು ನೋಡಲು ಸೇರಿದ್ದ ಜನರು ಫೋಟೋ, ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಆನೆಗಳು ನಿರ್ಗಮಿಸುತ್ತಿರುವುದನ್ನು ನೋಡುತ್ತಾ ಭಾವುಕರಾದರು.

ಕಳೆದ 60 ದಿನಗಳಿಂದಲೂ ಗಜಪಯಣದ ಮೂಲಕ ಎರಡು ಹಂತಗಳಲ್ಲಿ ಆಗಮಿಸುವ ಆನೆಗಳು ಕೋಡಿ ಸೋಮೇಶ್ವರ ದೇವಾಲಯದ ಆವರಣದಲ್ಲಿ ವಾಸ್ತವ್ಯ ಹೂಡುತ್ತವೆ. ಪ್ರತಿನಿತ್ಯ ಅರಮನೆಯಿಂದ ಬನ್ನಿ ಮಂಟಪದವರೆಗೂ ತಾಲೀಮಿನಲ್ಲಿ ಭಾಗವಹಿಸುತ್ತವೆ. ಈ ಅಭ್ಯಾಸದ ಜೊತೆಗೆ ಮರದ ಅಂಬಾರಿ ಹೊರುವ ತಾಲೀಮು, ಸಿಡಿಮದ್ದು ಸಿಡಿಸುವ ತಾಲೀಮು ಹಾಗು ಆನೆಗಳ ತೂಕ ಪರಿಶೀಲನೆಗಳೆಲ್ಲ ನಡೆಯುತ್ತವೆ.

ಪ್ರತಿದಿನ ಅರಮನೆಯಿಂದ-ಬನ್ನಿಮಂಟಪದವರೆಗೆ ಸಾಗುವ ಮಾರ್ಗದಲ್ಲಿ ಗಜಪಡೆಯನ್ನು ನೋಡಲು ಜನರು ಕಿಕ್ಕಿರಿದು ಸೇರುತ್ತಿದ್ದರು. ಈ ಸಂದರ್ಭದಲ್ಲಿ ಆನೆಗಳ ಫೋಟೋ, ವಿಡಿಯೋ ಚಿತ್ರೀಕರಿಸಿ ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದರು.

“ಈ ಬಾರಿ ಅದ್ಧೂರಿಯಾಗಿ ದಸರಾ ನಡೆದಿದೆ. 14 ಆನೆಗಳು ಮರಳಿ ತಮ್ಮ ಕ್ಯಾಂಪ್​ಗಳಿಗೆ ಹೊರಟಿವೆ. ಸಂಜೆ 5 ಗಂಟೆಯ ವೇಳೆಗೆ ತಮ್ಮ ಶಿಬಿರ ತಲುಪುತ್ತವೆ. ಎಲ್ಲ ಆನೆಗಳೂ ಆರೋಗ್ಯವಾಗಿದೆ. ಈ ಬಾರಿ 14 ಆನೆಗಳು ಮೆರವಣಿಗೆಯಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು” ಎಂದು ಡಿಸಿಎಫ್ ಪ್ರಭು ಗೌಡ ಹೇಳಿದರು.

ಕಳೆದ ಹಲವು ವರ್ಷಗಳಿಂದ ಆನೆಗಳಿಗೆ ಪೂಜೆ ಮಾಡುತ್ತಿರುವ ಅರ್ಚಕ ಪ್ರಹ್ಲಾದ್ ರಾವ್​ ಅವರು ಮಾತನಾಡಿ, “ಅಭಿಮನ್ಯು ನೇತೃತ್ವದ ಗಜಪಡೆ ಜಂಬೂಸವಾರಿಯನ್ನು ಯಶಸ್ವಿಯಾಗಿ ನಡೆಸಿಕೊಟ್ಟಿವೆ. ಕಳೆದ ಎರಡು ತಿಂಗಳು ಈ ಆನೆಗಳು ಪ್ರತಿನಿತ್ಯ ಮೈಸೂರಿನ ನಗರದಲ್ಲಿ ಜನರಿಗೆ ದರ್ಶನ ನೀಡಿದವು. ಇಲ್ಲಿನ ಜನರು ಎರಡು ತಿಂಗಳು ದಸರಾ ಆನೆಯನ್ನು ನೋಡಿರುವುದೇ ಅವರ ಭಾಗ್ಯ” ಎಂದು ತಿಳಿಸಿದರು.

ಈ ಬಾರಿಯ ಜಂಬೂ ಸವಾರಿ ಮೆರವಣಿಗೆಯನ್ನು ಸಾಮಾಜಿಕ ಜಾಲತಾಣದ ಮೂಲಕ 22 ಲಕ್ಷ ಮಂದಿ ವೀಕ್ಷಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ, ಒಂದು ಲಕ್ಷಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿರುವುದು ವಿಶೇಷ.

ಅರಮನೆ ಆವರಣದಲ್ಲಿ ಜಂಬೂಸವಾರಿಯ ದಿನ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಯ ಮೂರ್ತಿಯನ್ನು ಹೊತ್ತ ಅಭಿಮನ್ಯುವಿನ ನೇತೃತ್ವದಲ್ಲಿ ನಡೆದ ಮೆರವಣಿಗೆಯನ್ನು ಮಾರ್ಗದುದ್ದಕ್ಕೂ ಲಕ್ಷಾಂತರ ಮಂದಿ ಕಣ್ತುಂಬಿಕೊಂಡಿದ್ದಾರೆ.

ದಸರಾದ ಅಧಿಕೃತ ವೆಬ್‌ಸೈಟ್‌ನ ಮೂಲಕ ನೇರವಾಗಿ ಪ್ರಸಾರಗೊಂಡ ಜಂಬೂ ಸವಾರಿಯನ್ನು ವೆಬ್‌ಸೈಟ್‌ನಲ್ಲಿ ನೇರವಾಗಿ ಪ್ರಸಾರ ಮಾಡುವುದರೊಂದಿಗೆ, ಜಿಲ್ಲಾಡಳಿತ ಮತ್ತು ಸಿಎಂ ಅವರ ಅಧಿಕೃತ ಜಾಲತಾಣ ಸೇರಿದಂತೆ ಸರ್ಕಾರದ 22 ಅಧಿಕೃತ ಜಾಲತಾಣಗಳಿಗೂ ಸಂಪರ್ಕ ಕಲ್ಪಿಸಲಾಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment