Thursday, July 2, 2026
Google search engine
HomeಮನರಂಜನೆBIGG BOSS 12: ಜಾಲಿವುಡ್ ಸ್ಟುಡಿಯೊಗೆ ಬೀಗ: 2 ವಾರಕ್ಕೆ ಬಿಗ್ ಬಾಸ್ ಕ್ಲೋಸ್!

BIGG BOSS 12: ಜಾಲಿವುಡ್ ಸ್ಟುಡಿಯೊಗೆ ಬೀಗ: 2 ವಾರಕ್ಕೆ ಬಿಗ್ ಬಾಸ್ ಕ್ಲೋಸ್!

ಬೆಂಗಳೂರು ಹೊರವಲಯದಲ್ಲಿರುವ ಜಾಲಿವುಡ್ ಸ್ಟುಡಿಯೊಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಈ ಮೂಲಕ ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಶೋ ಎರಡನೇ ವಾರಕ್ಕೆ ಬಾಗಿಲು ಮುಚ್ಚಿದೆ.

ಪರವಾನಗಿ ಪಡೆದಿಲ್ಲ. ಅನುಮತಿಗಾಗಿ ಸರ್ಕಾರಕ್ಕೆ ಪತ್ರವೂ ಬರೆದಿಲ್ಲ ಹಾಗೂ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಮಾಡಿಲ್ಲ ಎಂಬುದೂ ಸೇರಿದಂತೆ ಸಂಪೂರ್ಣ ನಿಯಮಗಳನ್ನು ಉಲ್ಲಂಘಿಸಿದ್ದರಿಂದ ವಾಯು ನಿಯಂತ್ರಣ ಮಂಡಳಿ ಅಧಿಕಾರಿಗಳು ಬಿಡದಿಯಲ್ಲಿರುವ ಜಾಲಿವುಡ್ ಸ್ಟುಡಿಯೋಗೆ ಮಂಗಳವಾರ ಬಿಗ ಜಡಿದರು.

ಜಾಲವುಡ್ ಸ್ಟುಡಿಯೋದಲ್ಲಿ ಕಳೆದ ಎರಡು ವಾರಗಳಿಂದ ನಡೆಯುತ್ತಿದ್ದ ಬಿಗ್ ಬಾಸ್ ರಿಯಾಲಿಟಿ ಶೋನ 12ನೇ ಆವೃತ್ತಿಯೂ ಮುಚ್ಚಿದಂತೆ ಆಗಿದೆ. ಬಿಗ್ ಬಾಸ್ ಶೋನಲ್ಲಿ ಪಾಲ್ಗೊಂಡಿದ್ದ ಸ್ಪರ್ಧಿಗಳನ್ನು ಹೊರಗೆ ಕಳುಹಿಸಲಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಇದೇ ಮೊದಲ ಬಾರಿ ಕಾರ್ಯಕ್ರಮ ಅರ್ಧದಲ್ಲೇ ನಿಂತುಹೋಗಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದರೂ ಉತ್ತರಿಸದ ಬಿಗ್ ಬಾಸ್ ಕಾರ್ಯಕ್ರಮ ನಿರೂಪಕ ಸಂಸ್ಥೆ ಹಾಗೂ ಜಾಲಿವುಡ್ ಸ್ಟುಡಿಯೋ ಮಾಲೀಕರು ಪ್ರತಿಕ್ರಿಯಿಸದ ಕಾರಣ ಬೀಗ ಹಾಕುತ್ತಿದ್ದೇವೆ. ಜನರನ್ನು ಹೊರಗೆ ಕಳುಹಿಸಿದ ನಂತರ ಸ್ಟುಡಿಯೊಗೆ ಬೀಗ ಹಾಕಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ನೋಟಿಸ್ ನೀಡಿದ್ದೇವೆ: ಈಶ್ವರ್ ಖಂಡ್ರೆ

ಇದಕ್ಕೂ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ರಾಮನಗರ ಜಿಲ್ಲೆ ಬಿಡದಿ ಬಳಿಯಿರುವ ವೆಲ್ಸ್ ಸ್ಟುಡಿಯೋಸ್ ಅಂಡ್ ಎಂಟರ್ ಟೈನ್ಮೆಂಟ್ ಪ್ರೈ. ಲಿ. (ಜಾಲಿ ವುಡ್ ಸ್ಟುಡಿಯೋ)ಗೆ ಜಲ ಕಾಯಿದೆ, ವಾಯು ಕಾಯಿದೆಯಡಿ ಅನುಮತಿ ಪಡೆಯದೆ ಕಾರ್ಯಾಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ ಎಂದು ಸ್ಪಷ್ಟಪಡಿಸಿದರು.

ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿರುವ ಸ್ಟುಡಿಯೋಗೆ ನೋಟಿಸ್ ನೀಡಿರುವ ವಿಚಾರ ಮಾಧ್ಯಮದಿಂದ ತಮಗೆ ತಿಳಿಯಿತು. ಈ ಬಗ್ಗೆ ಮಾಹಿತಿ ಪಡೆದಾಗ,   ರಾಮನಗರ ಪ್ರಾದೇಶಿಕ ಕಚೇರಿಯಿಂದ 2024ರಲ್ಲೇ 2 ಬಾರಿ ನೋಟಿಸ್ ನೀಡಿದ್ದರೂ ಅನುಪಾಲನೆ ಮಾಡಿದ ಕಾರಣ ಈ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದರು.

ಇಲ್ಲಿ ಎಸ್.ಟಿ.ಪಿ. ಕಾರ್ಯನಿರ್ವಹಣೆ ಸೇರಿದಂತೆ ಸಮರ್ಪಕವಾಗಿ ತಾಜ್ಯ ವಿಲೇವಾರಿ ಆಗುತ್ತಿಲ್ಲ, ಜನರೇಟರ್ ಸೆಟ್ ಗಳಿದ್ದು ಅದಕ್ಕೂ ಅನುಮತಿ ಪಡೆದಿಲ್ಲ ಎಂದು ತಿಳಿಸಿದ್ದಾರೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಹೀಗಾಗಿ ಮಂಡಳಿ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments