Wednesday, May 20, 2026
Google search engine
Homeದೇಶಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದ 13ನೇ ಮಹಡಿಯಿಂದ ಬಿದ್ದು ಇಬ್ಬರು ಕಾರ್ಮಿಕರ ದುರ್ಮರಣ

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದ 13ನೇ ಮಹಡಿಯಿಂದ ಬಿದ್ದು ಇಬ್ಬರು ಕಾರ್ಮಿಕರ ದುರ್ಮರಣ

ನಿರ್ಮಾಣ ಹಂತದ ಅಪಾರ್ಟ್‌ಮೆಂಟ್ ಕಟ್ಟಡದ 13ನೇ ಮಹಡಿಯಿಂದ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ಶುಕ್ರವಾರ ಸಂಭವಿಸಿದೆ.

ಶುಕ್ರವಾರ ಮಧ್ಯಾಹ್ನ ಬೆಳ್ಳಂದೂರು ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಪಶ್ಚಿಮ ಬಂಗಾಳದ ಸೋನ್‌ಪುರ್ ಮೂಲದ ಅಮೀರ್ ಹುಸೇನ್ (33) ಹಾಗೂ ಮುಮ್ತಾಜ್ ಅಲಿ (28) ಮೃತಪಟ್ಟಿದ್ದಾರೆ.

ಖಾಸಗಿ ಕಂಪನಿಯೊಂದರ ಅಪಾರ್ಟ್‌ಮೆಂಟ್ ಕಟ್ಟಡ ನಿರ್ಮಾಣ ಕೆಲಸವನ್ನು ಇಂಪೀರಿಯಲ್ ಬಿಲ್ಡ್ ಟೆಕ್ ಪ್ರೈವೇಟ್ ಲಿಮಿಟೆಡ್‌ಗೆ ಗುತ್ತಿಗೆಗೆ ವಹಿಸಲಾಗಿತ್ತು. ಶುಕ್ರವಾರ ಮಧ್ಯಾಹ್ನ ಕಟ್ಟಡದ ಹದಿಮೂರನೇ ಮಹಡಿಯ ಬಾಲ್ಕನಿಯಲ್ಲಿ ನಿಂತು ಕಾರ್ಮಿಕರು ಕೆಲಸ ಮಾಡುತ್ತಿದ್ದರು.

ಏಕಾಏಕಿ ಬಾಲ್ಕನಿ ಕುಸಿದ ಪರಿಣಾಮ ಇಬ್ಬರೂ 13ನೇ ಮಹಡಿಯಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸೂಕ್ತ ಭದ್ರತೆ ವಹಿಸದೆ ನಿರ್ಲಕ್ಷ್ಯತನದಿಂದ ಇಬ್ಬರು ಕಾರ್ಮಿಕರ ಸಾವಿಗೆ ಕಾರಣವಾದ ಆರೋಪದಡಿ ಬಿಲ್ಡ್ ಟೆಕ್ ಪ್ರೈವೇಟ್ ಲಿಮಿಟೆಡ್ ಸಿಬ್ಬಂದಿ ಹಾಗೂ ಸೈಟ್ ಇಂಜಿನಿಯರ್ ವಿರುದ್ಧ ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರು ಜನರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments