2024ರ ಲೋಕಸಭಾ ಚುನಾವಣೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಭಾರೀ ಜಿಗಿತ ಕಂಡಿದ್ದು, ಒಂದೇ ದಿನದಲ್ಲಿ 4 ವರ್ಷಗಳಲ್ಲೇ ಗರಿಷ್ಠ ಮಟಕ್ಕೇರಿ ದಾಖಲೆ ಬರೆದಿದೆ.
ಇತಿಹಾಸದಲ್ಲಿ ಮೊದಲ ಬಾರಿ ಲೋಕಸಭಾ ಚುನಾವಣೆ ಮತದಾನದ ನಂತರ ಮತ್ತು ಮತ ಎಣಿಕೆ ಮೊದಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಿದರು.
ಇದೇ ಮೊದಲ ಬಾರಿಗೆ 642 ದಶಲಕ್ಷ ಜನರು ಮತ ಚಲಾಯಿಸಿದ್ದಾರೆ. ಅದರಲ್ಲೂ ಮಹಿಳೆಯರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿರುವುದು ದಾಖಲೆಯಾಗಿದೆ ಎಂದು ಅವರು ಹೇಳಿದರು.
ಮತ ಎಣಿಕೆ ವೇಳೆ ಡೀಪ್ ಫೇಕ್ ಮುಂತಾದ ಲೋಪಗಳು ಆಗದಂತೆ ಎಚ್ಚರಿಕೆ ವಹಿಸಲಾಗಿದೆ. ಪ್ರತಿಯೊಂದು ಮತಪೆಟ್ಟಿಗೆ ಯಂತ್ರಗಳಲ್ಲಿ ಮತ ಎಣಿಕೆ ಮಾಡುವಾಗ ನಿರ್ದಿಷ್ಟ ಮಾನದಂಡ ಬಳಸಲಾಗುತ್ತಿದೆ. ಅಲ್ಲದೇ ಸಿಸಿಟಿವಿಗಳನ್ನು ಅಳವಡಿಸಲಾಗಿದೆ ಎಂದು ಅವರು ವಿವರಿಸಿದರು.
ಮತ ಎಣಿಕೆ ಶಾಂತಿಯುತವಾಗಿ ನಡೆಯಲಿದೆ ಎಂಬ ವಿಶ್ವಾಸವಿದೆ. ಮೊದಲು ಪೋಸ್ಟಲ್ ಮತಗಳ ಎಣಿಕೆ ನಡೆಯಲಿದೆ. ನಂತರ ಮತಯಂತ್ರಗಳಲ್ಲಿನ ಮತ ಎಣಿಕೆ ನಡೆಯಲಿದೆ. ಈ ಬಾರಿ 4 ಲಕ್ಷ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ನಡೆದಿದ್ದು, ಶೇ.90ರಷ್ಟು ಅಭ್ಯರ್ಥಿಗಳನ್ನು ಕರೆದು ತಿಳಿಸಿ ಹೇಳಿದ್ದೇವೆ ಎಂದು ಅವರು ಹೇಳಿದರು.