Wednesday, May 20, 2026
Google search engine
Homeಅಪರಾಧ150 ಕೋಟಿ ದೋಚಿದ್ದ ಸೈಬರ್ ವಂಚಕ ದಾವಣಗೆರೆಯಲ್ಲಿ ಅರೆಸ್ಟ್

150 ಕೋಟಿ ದೋಚಿದ್ದ ಸೈಬರ್ ವಂಚಕ ದಾವಣಗೆರೆಯಲ್ಲಿ ಅರೆಸ್ಟ್

ಸಿಸಿಟಿವಿ ಕೆಲಸ ಮಾಡಿಕೊಂಡು ದೇಶದ ನಾನಾ ಬ್ಯಾಂಕ್ ಖಾತೆಗಳಿಂದ 150 ಕೋಟಿ ರೂ. ದೋಚಿದ್ದ ಸೈಬರ್ ವಂಚಕನನ್ನು ದಾವಣೆಗೆರೆ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ಟೌನ್ ಶಾಂತಿನಗರ ನಿವಾಸಿ ಸೈಯದ್ ಅರ್ಫಾತ್ (28) ಎಂಬಾತನನ್ನು ಬಂಧಿಸಲಾಗಿದ್ದು, ಈತ ದಾವಣಗೆರೆಯಲ್ಲಿ ಸಿಸಿಟಿವಿ ಕೆಲಸ ಮಾಡಿಕೊಂಡಿದ್ದ.

ಆರೋಪಿಯ ಮೊಬೈಲ್ ವಶಪಡಿಸಿಕೊಂಡು ಪೊಲೀಸರು ಪರಿಶೀಲಿಸಿದಾಗ ಆರೋಪಿ ಖಾತೆಯಲ್ಲಿ 18 ಕೋಟಿ ರೂ. ಪತ್ತೆಯಾಗಿದೆ. ಈತನ ಖಾತೆಯಲ್ಲಿ ಜುಲೈ 27 ರಿಂದ ಆಗಸ್ಟ್ 19 ರವರೆಗೆ ಸುಮಾರು 150 ಕೋಟಿ ರೂ. ಹಣ ಇದ್ದು, ಆರೋಪಿಗಳು 132 ಕೋಟಿ ರೂ. ಹಣ ವಿತ್ ಡ್ರಾ. ಮಾಡಿಕೊಂಡಿದ್ದಾರೆ.

ಆರೋಪಿಗಳು ದಾವಣಗೆರೆ ನಗರದ ನಿಟ್ಟುವಳ್ಳಿ ಕೆನರಾ ಬ್ಯಾಂಕ್ ಖಾತೆಯಿಂದ ಪ್ರಮೋದ್ ಎಂಬುವರ 52,60, 523 ರೂ.ಹಣವನ್ನು ಎಗರಿಸಿದ್ದರು. ಈ ಸಂಬಂಧ ದಾವಣಗೆರೆ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಆರೋಪಿಯ ಮೊಬೈಲ್ ಪರಿಶೀಲನೆ ವೇಳೆ ಬಹುದೊಡ್ಡ ಪ್ರಕರಣದ ರಹಸ್ಯ ಬಯಲಾಗಿದೆ. ಸೈಬರ್ ಕ್ರೈಮ್ ಪೊಲೀಸರ ಸಾಧನೆಗೆ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದ ಗಾಜೀಯ ಬಾದ್, ಜಮ್ಮು & ಕಾಶ್ಮೀರದ ಶ್ರೀನಗರ, ಆಂದ್ರ ಪ್ರದೇಶದ ಏಲೂರು, ಮಹರಾಷ್ಟ್ರದ ಮುಂಬೈ ನಗರ, ಬೆಂಗಳೂರು ನಗರ ಹಾಗೂ ದಾವಣಗೆರೆಯ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದೇ ಮೊದಲ ಬಾರಿಗೆ ದಾವಣಗೆರೆ ಜಿಲ್ಲೆಯ ಸೈಬರ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಹುದೊಡ್ಡ ಪ್ರಕರಣದ ಆರೋಪಿಯನ್ನು ಬಂಧಿಸಿದ್ದಾರೆ.

127 ಪ್ರಕರಣ ಪತ್ತೆ!

ಆರೋಪಿಗಳಾದ ಸೈಯದ್ ಅರ್ಫಾತ್ ಹಾಗೂ ಉಬೇದ್ ವಿರುದ್ಧ ದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ 127 ಪ್ರಕರಣಗಳು ದಾಖಲಾಗಿರುವುದು ತನಿಖೆ ವೇಳೆ ಗೊತ್ತಾಗಿದೆ.

ಜುಲೈ 27 ರಿಂದ ಆಗಸ್ಟ್ 19ರ ವರೆಗೆ ಆರೋಪಿಗಳು ಬೇರೆಯವರ ಬ್ಯಾಂಕ್ ಖಾತೆಗಳಿಂದ ₹ 150 ಕೋಟಿ ಹಣವನ್ನು ತಮ್ಮ ಖಾತೆಗೆ ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚನೆ ಎಸಗಿದ್ದಾರೆ. ಈ ಪೈಕಿ ₹ 132 ಕೋಟಿ ಹಣವನ್ನು ವಿತ್ ಡ್ರಾ ಮಾಡಿಕೊಂಡಿದ್ದಾರೆ. ಖಾತೆಯಲ್ಲಿ ಉಳಿದಿದ್ದ ₹18 ಕೋಟಿ ಹಣವನ್ನು ಪೊಲೀಸರು ಬ್ಯಾಂಕ್ ಮೂಲಕ ಫ್ರೀಜ್ ಮಾಡಿಸಿದ್ದಾರೆ.

** 18 ಕೋಟಿ ಪೈಕಿ ಕೋರ್ಟ್ ಆದೇಶದಂತೆ ದೂರುದಾರ ಪ್ರಮೋದ್ ಅವರಿಗೆ ₹ 52.60 ಲಕ್ಷ ಹಣ ಕೊಡಿಸಲಾಗಿದೆ. ಆರೋಪಿಗಳ ಬಗ್ಗೆ ದೇಶದ ವಿವಿಧ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ. ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ಆಂಧ್ರಪ್ರದೇಶ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳ ಸೈಬರ್ ಠಾಣೆಗಳಲ್ಲಿ ಇವರ ವಿರುದ್ಧ ಪ್ರಕರಣಗಳು ದಾಖಲಾಗಿವೆ.

‘ಇದೇ ಮೊದಲ ಬಾರಿ ಆರೋಪಿ ಸಿಕ್ಕಿಬಿದ್ದಿದ್ದು,ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ’ ಎಂದು ಸೈಬ‌ರ್ ಅಪರಾಧ ಠಾಣೆಯ ಡಿವೈಎಸ್‌ಪಿ ಬಂಕಾಳಿ ನಾಗಪ್ಪ ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments