Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ರಾಜ್ಯ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಜುಲೈ 1ರಿಂದಲೇ ಶೇ.2 ತುಟ್ಟಿಭತ್ಯೆ ಹೆಚ್ಚಳ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 35 ವೀಕ್ಷಣೆಗಳು
vidhana souda
vidhana souda

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕಳೆದ ಜುಲೈ 1ರಿಂದ ಅನ್ವಯವಾಗುವಂತೆ ಶೇ.2 ತುಟ್ಟಿಭತ್ಯೆಯನ್ನು ಹೆಚ್ಚಿಸುವ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದಾರೆ.

ಶೇ.2 ತುಟ್ಟಿಭತ್ಯೆಯನ್ನು ಹೆಚ್ಚಿಸಿರುವ ಆದೇಶವು ಮುಂದಿನ 2 ರಿಂದ 3 ದಿನಗಳಲ್ಲಿ ಅಧಿಕೃತ ಆದೇಶ ಹೊರಬೀಳಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಮನವಿ ಮಾಡಿದ್ದರು.

ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡುವುದು ಸಹ ಸಂಪ್ರದಾಯವಾಗಿರುತ್ತದೆ. ಹೀಗಾಗಿ ಬಾಕಿ ಇರುವ ತುಟ್ಟಿಭತ್ಯೆ ಬಿಡುಗಡೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕೋರಿದ್ದರು.

ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಉಲ್ಲೇಖಿತ ಆದೇಶದಲ್ಲಿ ದಿನಾಂಕ: 01-07-2025ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ.

ಷಡಕ್ಷರಿ ಧನ್ಯವಾದ:

ರಾಜ್ಯ ಸರ್ಕಾರಿ ನೌಕರರಿಗೆ ಶೇ.2 ತುಟ್ಟಿಭತ್ಯೆಯನ್ನು ಹೆಚ್ಚಿಸುವ ಕಡತಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ರಾಜ್ಯ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment