Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ರಾಜ್ಯ

ಜಿಲ್ಲಾಡಳಿತದ ವಾಹನದಲ್ಲೇ ಬಂದು ಹಾಸನಾಂಬೆ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
CM Siddaramaiah visit hasanambe

ಮುಖ್ಯಮಂತ್ರಿ ಸಿದ್ದರಾಮಯ್ಯ ಸತತ ಎರಡನೇ ವರ್ಷ ಹಾಸನದ ಅಧಿದೇವತೆ ಹಾಸನಂಬೆ ದೇವಿಯ ದರ್ಶನ ಪಡೆದಿದ್ದಾರೆ.

ಮಂಗಳವಾರ ಡಿಸಿಎಂ ಡಿಕೆ ಶಿವಕುಮಾರ್ ಕುಟುಂಬ ಸಮೇತರಾಗಿ ಬಂದು ಹಾಸನಾಂಬೆ ದರ್ಶನ ಪಡೆದ ಮಾರನೇ ದಿನ ಬುಧವಾರ ಬೆಳಗ್ಗೆ 12 ಗಂಟೆ ಸುಮಾರಿಗೆ ಸಿಎಂ ಸಿದ್ದರಾಮಯ್ಯ ಸಹದ್ಯೋಗಿ ಸಚಿವರ ಜೊತೆ ಹಾಸನಾಂಬೆ ದೇವಿ ದರ್ಶನ ಪಡೆದರು.

ಜಿಲ್ಲಾಡಳಿತ ವ್ಯವಸ್ಥೆ ಮಾಡಿದ ಶಿಷ್ಟಾಚಾರದ ವಾಹನದಲ್ಲೇ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಸ್ವಾಗತಿಸಿದರು. ಸಿಎಂ ಬರುತ್ತಿದ್ದಂತೆ ಜಾನಪದ ಕಲಾತಂಡಗಳು ಜಗ್ಗಲಿಗೆ ಬಾರಿಸಿ, ಕೊಂಬು ಕಂಸಾಳೆ ಊದಿ ಸ್ವಾಗತ ಮಾಡಿಕೊಂಡರು. ಸಿದ್ದರಾಮಯ್ಯ ಅವರ ಜೊತೆ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿದ್ದರು. ಬಳಿಕ ಜಿಲ್ಲಾಡಳಿತ ಸಿಎಂ ಅವರನ್ನು ಮಂಗಳವಾದ್ಯಗಳೊಂದಿಗೆ ದೇವಿ ದರ್ಶನಕ್ಕೆ ಕರೆದೊಯ್ಯಿತು.

ಕಳೆದ ಎರಡು ವರ್ಷಗಳಿಂದ ಸಿಎಂ ಸಿದ್ದರಾಮಯ್ಯ ದೇವಿ ದರ್ಶನ ಪಡೆಯುತ್ತಿದ್ದು, ಈ ಮೂಲಕ ಮೂರನೇ ಬಾರೀ ದೇವಿ ದರ್ಶನ ಪಡೆದುಕೊಂಡಿದ್ದಾರೆ. ದೇವಿ ದರ್ಶನ ಪಡೆದು ದರ್ಬಾರ್ ಗಣಪತಿ ಹಾಗೂ ಸಿದ್ದೇಶ್ವರಸ್ವಾಮಿ ದೇವರ ದರ್ಶನ ಪಡೆದರು.

ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್, ಡಿಸಿ ಕೆ.ಎಸ್.ಲತಾಕುಮಾರಿ, ದಕ್ಷಿಣ ವಯಲ ಐಜಿಪಿ, ಬೋರಲಿಂಗಯ್ಯ ಎಸ್ಪಿ ಮಹಮದ್ ಸುಜೀತಾ ಉಪಸ್ಥಿತರಿದ್ದರು. ಸಿಎಂ ಆಗಮನದ ಹಿನ್ನೆಲೆ ದೇವಾಲಯದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment