Sunday, June 14, 2026
Google search engine
Homeರಾಜ್ಯನಾವು ಹಿಂದುಳಿದ ವರ್ಗಕ್ಕೆ ಸೇರಿಲ್ಲ: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ತಿರಸ್ಕರಿಸಿದ ಸುಧಾಮೂರ್ತಿ ಕುಟುಂಬ

ನಾವು ಹಿಂದುಳಿದ ವರ್ಗಕ್ಕೆ ಸೇರಿಲ್ಲ: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ತಿರಸ್ಕರಿಸಿದ ಸುಧಾಮೂರ್ತಿ ಕುಟುಂಬ

ನಾವು ಹಿಂದುಳಿದ ವರ್ಗಕ್ಕೆ ಸೇರಿಲ್ಲ. ಆದ್ದರಿಂದ ನಾವು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದರಿಂದ ಸರ್ಕಾರಕ್ಕೆ ಯಾವುದೇ ಉಪಯೋಗವಿಲ್ಲ ಎಂದು ಹೇಳಿರುವ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಕುಟುಂಬ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ನಿರಾಕರಿಸಿದೆ.

ಸಾಮಾಜಿಕ ನ್ಯಾಯಕ್ಕಾಗಿ ಯೋಜನೆಗಳ ಹಂಚಿಕ ಮಾಡಲು ಕರ್ನಾಟಕ ಸರಕಾರ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ರಾಜ್ಯಸಭೆ ಸದಸ್ಯೆ ಸುಧಾ ಮೂರ್ತಿ ದೃಢೀಕರಣ ಪತ್ರದಲ್ಲಿ ತಿಳಿಸಿದ್ದಾರೆ.

ನಾವು ಹಿಂದುಳಿದ ವರ್ಗದ ಯಾವ ಜಾತಿಗೂ ಸೇರುವವರಲ್ಲ. ಆದ್ದರಿಂದ ಈ ಸಮೀಕ್ಷೆಯಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಆದ್ದರಿಂದ ನಾವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್ 10 ರಂದು ಸುಧಾಮೂರ್ತಿ ದಂಪತಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸ್ವಯಂ ದೃಢೀಕರಣ ಪತ್ರ ಬರೆದಿದ್ದಾರೆ. ಕೆಲವು ವೈಯಕ್ತಿಕ ಕಾರಣಗಳಿಂದ ಮಾಹಿತಿ ನೀಡಲು ನಿರಾಕರಿಸುತ್ತೇವೆ. ನಾನು ಮತ್ತು ನನ್ನ ಕುಟುಂಬ ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಮತ್ತು ನಮ್ಮ ಮಾಹಿತಿಯನ್ನು ನೀಡಲು ನಿರಾಕರಿಸಿದ್ದೇನೆ ಎಂದು ಈ ಮೂಲಕ ದೃಢೀಕರಿಸುತ್ತೇವೆ ಎಂದು ದಂಪತಿ ತಿಳಿಸಿದ್ದಾರೆ.

ಬೆಂಗಳೂರಿನ ಜಯನಗರದಲ್ಲಿ ಸುಧಾಮೂರ್ತಿ ಅವರ ನಿವಾಸವಿದ್ದು, ದಂಪತಿ ಕರ್ನಾಟಕದ ನಿವಾಸಿಗಳಾಗಿದ್ದಾರೆ. ಕರ್ನಾಟಕ ಹೈಕೋರ್ಟ್ ಸಮೀಕ್ಷೆಯಲ್ಲಿ ಭಾಗವಹಿಸುವುದು ಕಡ್ಡಾಯವಲ್ಲ ಮತ್ತು ಗಣತಿದಾರರು ಸಾರ್ವಜನಿಕರಿಂದ ಉತ್ತರಗಳನ್ನು ಒತ್ತಾಯಿಸುವಂತಿಲ್ಲ ಎಂದು ತೀರ್ಪು ನೀಡಿರುವುದರಿಂದ ದಂಪತಿ ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ.

ಕರ್ನಾಟಕ ಸರ್ಕಾರ ಸೆಪ್ಟೆಂಬರ್ 22ರಿಂದ ಜಾತಿ ಗಣತಿ ಎಂದೇ ಕರೆಯಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದ್ದು, ಅಕ್ಟೋಬರ್ 18ರ ಗಡುವು ನೀಡಲಾಗಿದೆ. ಈ ಸಮೀಕ್ಷೆಗಾಗಿ ರಾಜ್ಯ ಸರ್ಕಾರ 420 ಕೋಟಿ ರೂ. ವಿನಿಯೋಗಿಸುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments