ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಾಯಿ ಸೋನಿಯಾ ಗಾಂಧಿ ಬಿಟ್ಟುಕೊಟ್ಟ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಲ್ಲಿ 3 ಲಕ್ಷಕ್ಕೂ ಅಧಿಕ ಮತಗಳಿಂಧ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಉತ್ತರ ಪ್ರದೇಶದಲ್ಲಿ ಅತ್ಯಧಿಕ ಮತಗಳ ಅಂತರದಿಂದ ಗೆದ್ದ ಸ್ಪರ್ಧಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಕೇರಳದ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಸೋನಿಯಾ ಗಾಂಧಿ ಬಿಟ್ಟುಕೊಟ್ಟ ರಾಯ್ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಈ ಮೂಲಕ ರಾಹುಲ್ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದು ಎರಡೂ ಕ್ಷೇತ್ರಗಳಲ್ಲೂ ಜಯ ಗಳಿಸಿದ್ದಾರೆ.
ರಾಹುಲ್ ಗಾಂಧಿ ಪ್ರತಿಸ್ಪರ್ಧಿ ಬಿಜೆಪಿಯ ದಿನೇಶ್ ಪ್ರತಾಪ್ ವಿರುದ್ಧ ಜಯ ಸಾಧಿಸಿದರು. ಸೋನಿಯಾ ಗಾಂಧಿ ಈ ಕ್ಷೇತ್ರದಿಂದ ಕಳೆದ ಬಾರಿ 1.67 ಲಕ್ಷ ಮತಗಳಿಂದ ಗೆಲುವು ಕಂಡಿದ್ದರು.
ಇದಕ್ಕೂ ಮುನ್ನ ರಾಹುಲ್ ಗಾಂಧಿ 2014ರಿಂದ ಎರಡು ಬಾರಿ ಅಮೇಥಿಯಿಂದ ಸ್ಪರ್ಧಿಸಿದ್ದು, ಕಳೆದ ಬಾರಿ ಸ್ಮೃತಿ ಇರಾನಿ ವಿರುದ್ಧ ಸೋಲುಂಡಿದ್ದರು.