Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಬೆಂಗಳೂರು

ಬೆಂಗಳೂರಿನಲ್ಲಿ ಅಕ್ರಮವಾಗಿ ಸಂಚರಿಸುತ್ತಿದ್ದ 25 ಟೂರಿಸ್ಟ್ ಬಸ್ ವಶ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 3 ವೀಕ್ಷಣೆಗಳು
tourist bus

ಬೆಂಗಳೂರು: ರಾಜ್ಯದ ಸಾರಿಗೆ ಇಲಾಖೆಗೆ ನಿಗದಿತ ತೆರಿಗೆ ಪಾವತಿಸದೇ ಅಕ್ರಮವಾಗಿ ಪ್ರಯಾಣಿಕರನ್ನು ಕೊಂಡೊಯ್ಯುವ ಅನ್ಯ ರಾಜ್ಯಗಳ ಟೂರಿಸ್ಟ್ ಬಸ್​​ಗಳನ್ನು ಶುಕ್ರವಾರ ಮುಂಜಾನೆ ಸಾರಿಗೆ ಅಧಿಕಾರಿಗಳ ತಂಡ ನಗರದಲ್ಲಿ ವಶಕ್ಕೆ ಪಡೆದಿದೆ.

ಅಪರ ಸಾರಿಗೆ ಆಯುಕ್ತೆ ಓಂಕಾರೇಶ್ವರಿ ನೇತೃತ್ವದಲ್ಲಿ ಜಂಟಿ ಸಾರಿಗೆ ಆಯುಕ್ತೆ ಶೋಭಾ ಹಾಗೂ ಗಾಯತ್ರಿ ನೇತೃತ್ವದ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ತಮಿಳುನಾಡು, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್ ಬಸ್​​ಗಳನ್ನು ತಡೆದು ಪರಿಶೀಲನೆ ನಡೆಸಿದಾಗ ತೆರಿಗೆ ಪಾವತಿಸದೇ ಸಂಚರಿಸುತ್ತಿರುವುದು ಬೆಳಕಿಗೆ ಬಂದಿದೆ. ರಾಜ್ಯಕ್ಕೆ ತೆರಿಗೆ ಪಾವತಿಸದೇ ರಾಜ್ಯ ಸಾರಿಗೆ ಇಲಾಖೆಗೆ ನಷ್ಟ ಉಂಟು ಮಾಡಿದ್ದವು ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ.

ಬೆಂಗಳೂರು – ಹೊಸೂರು ರಾಷ್ಟ್ರೀಯ ಹೆದ್ದಾರಿ ಆನೇಕಲ್​​ನ ಅತ್ತಿಬೆಲೆಯ ಚೆಕ್​​ಪೋಸ್ಟ್​​ನಲ್ಲಿ ತಪಾಸಣೆ ನಡೆಸಿ ಖಾಸಗಿ ಬಸ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ಹಾಗೂ ಬಸ್​​ಗಳ ಮಾಲೀಕರ ಮಾಹಿತಿ ಕಲೆ ಹಾಕಲಾಗುತ್ತಿದೆ.

ಈ ಕುರಿತು ಅಪರ ಸಾರಿಗೆ ಆಯುಕ್ತೆ ಓಂಕಾರೇಶ್ವರಿ ಅವರು ಮಾತನಾಡಿ ಶುಕ್ರವಾರ ಬೆಳಗಿನ ಜಾವ ಮೂರರಿಂದ ನಾಲ್ಕು ಗಂಟೆಯ ವೇಳೆ ನಾವು ಈ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆವು. ನಮ್ಮ ಬೆಂಗಳೂರಿನ ಎಲ್ಲ ಜಂಟಿ ಸಾರಿಗೆ ಆಯುಕ್ತರು ಹಾಗೂ ನಮ್ಮ ಆರ್​ಟಿಒಗಳು, ಇನ್ಸ್​ಪೆಕ್ಟರ್​​ಗಳು ​​ ಸೇರಿದಂತೆ ನಾವೆಲ್ಲರೂ ಇಂದು ಅತ್ತಿಬೆಲೆ ಚೆಕ್​ಪೋಸ್ಟ್​ ಬಳಿ ಬಂದು ನಿಂತಿದ್ದೆವು.

ಹೊರ ರಾಜ್ಯದಲ್ಲಿ ನೊಂದಣಿಯಾಗಿರುವ ಆಲ್​ ಇಂಡಿಯಾ ಟೂರಿಸ್ಟ್​ ಬಸ್​ಗಳನ್ನು ನಾವಿಂದು ಕಾರ್ಯಾಚರಣೆ ಮಾಡಿದ್ದೇವೆ. ಏಕೆಂದರೆ, ಮೊದಲನೆಯದಾಗಿ ಪರವಾನಗಿ ನಿಯಮಗಳ ಉಲ್ಲಂಘನೆ ಇದೆ. ಎರಡನೆಯದಾಗಿ ನಮ್ಮ ಕರ್ನಾಟಕ ಸ್ಟೇಟ್​ ಟ್ಯಾಕ್ಸ್​ ಕಟ್ಟಿಲ್ಲ.

ನಮ್ಮ ರಾಜ್ಯದ ತೆರಿಗೆ ಕಟ್ಟಿಸಿಕೊಳ್ಳುವುದಕ್ಕಾಗಿ ಈ ವಾಹನಗಳನ್ನು ಸೀಜ್ ಮಾಡಿದ್ದೇವೆ. ಈ ವಾಹನಗಳನ್ನು ವಶಕ್ಕೆ ಪಡೆದ ಸಂದರ್ಭದಲ್ಲಿ ಈ ಬಸ್​​ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ನಾವು ಪರ್ಯಾಯ ವ್ಯವಸ್ಥೆಯನ್ನೂ ಸಹ ಮಾಡಿದ್ದೇವೆ. ಯಾರಿಗೂ ಏನೂ ತೊಂದರೆಯಾಗಿಲ್ಲ, ನಮ್ಮ ಅಧಿಕಾರಿಗಳು ತಂಡವನ್ನು ಮಾಡಿಕೊಂಡು ಕೂಡಲೇ ಪ್ರಯಾಣಿಕರಿಗೆ ವ್ಯವಸ್ಥೆ ಮಾಡಿದೆವು. ಹೊರ ರಾಜ್ಯದ ಟೂರಿಸ್ಟ್​ ಬಸ್​ಗಳನ್ನು ವಶಕ್ಕೆ ಪಡೆದಿರುವುದು ಇದೇ ಮೊದಲು ಎಂದು ನಾನು ಭಾವಿಸುತ್ತೇನೆ. ಸಾರಿಗೆ ಆಯುಕ್ತರ ನಿರ್ದೇಶನದ ಮೇರೆಗೆ ಈ ಕಾರ್ಯಾಚರಣೆಯನ್ನು ಮಾಡಿದ್ದೇವೆ’ ಎಂದು ಹೇಳಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment